IND vs ENG: 3 ಬದಲಾವಣೆ ಮಾಡಿದ ಟೀಂ ಇಂಡಿಯಾ ಅವೇನು ಗೊತ್ತಾ ?
India vs England: ಆತಿಥೇಯ ಇಂಗ್ಲೆಂಡ್ ಮತ್ತು ಟೀಂ ಇಂಡೊಯಾ ನಡುವಿನ ದ್ವಿತೀಯ ಟೆಸ್ಟ್ ಆರಂಭಗೊಂಡಿದೆ. ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡಲ್ಲಿ 3 ಬದಲಾವಣೆಗಳನ್ನು ಮಾಡಿದೆ. ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ಮತ್ತು ಜಸ್‌ಪ್ರೀತ್ ಬುಮ್ರಾ ಬದಲಿಗೆ ಆಕಾಶ್ ದೀಪ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ಆಡುತ್ತಿದ್ದಾರೆ.
ಬರ್ಮಿಂಗ್‌ಹ್ಯಾಮ್: ಲೀಡ್ಸ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ ಎಡ್ಜ್‌ಬಾಸ್ಟನ್‌ನಲ್ಲಿ ಬುಧವಾರ (ಜು. 2) ಆರಂಭವಾದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಶುಭ್ಮನ್ ಗಿಲ್ (Shubman Gill) ಪಡೆ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಲು ಮುಂದಾಗಿದೆ. ಇದೀಗ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (Ben Stokes) ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದ್ದು, ಶಾರ್ದೂಲ್ ಠಾಕೂರ್ ಬದಲಿಗೆ ನಿತೀಶ್ ಕುಮಾರ್ ಮತ್ತು ಜಸ್‌ಪ್ರೀತ್ ಬುಮ್ರಾ ಬದಲಿಗೆ ಆಕಾಶ್ ದೀಪ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ಆಡುತ್ತಿದ್ದಾರೆ.