ಸಚಿವ ಶರಣಪ್ರಕಾಶಗೆ ಅಭಾವೀಮ ವತಿಯಿಂದ ಸನ್ಮಾನ

ಬಳ್ಳಾರಿ: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ವಿಮ್ಸ್) ಭೇಟಿ ನೀಡಿದ್ದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಗೌರ್ವಪೂರ್ವಕವಾಗಿ ಸನ್ಮಾನಿಸಲಾಯಿತು.

 

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ನೇತೃತ್ವದಲ್ಲಿ ಮಹಾಸಭಾದ ಅವಳಿ ಜಿಲ್ಲೆಗಳ ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್, ವಿಮ್ಸ್ ನಿರ್ದೇಶಕ ಡಾ.ಗಟಗಾಧರಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

ಇತ್ತೀಚೆಗೆ ಬಳ್ಳಾರಿ ನಗರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಹಾನಗಲ್ ಕುಮಾರೇಶ್ವರರ ಜನ್ಮ ಜಯಂತ್ಯುತ್ಸವ ಹಾಗೂ ಹಿರಿಯ ಲಿಂಗಾಯತ ಸಮುದಾಯದ ಸಾಧಕರಿಗೆ ಸನ್ಮಾನ ಏರ್ಪಡಿಸಲಾಗಿತ್ತು. ಈ  ವೇಳೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಅನ್ಯ ಕಾರ್ಯ ನಿಮಿತ್ತ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ನಗರಕ್ಕೆ ಗುರುವಾರ ಭೇಟಿ ನೀಡಿದ  ವೇಳೆ ಸನ್ಮಾನಿಸಿ, ಸ್ಮರಣಿಕೆ ನೀಡಲಾಯಿತು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top