ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಬಿಡದಿಯ ವಾಹನ ತಯಾರಿಕಾ ಘಟಕದ ವಿಸ್ತರಣೆಗೆ ಕುರಿತಂತೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಮತ್ತು ರಾಜ್ಯ ಸರ್ಕಾರದ ನಡುವೆ ಒಡಂಬಡಿಕೆಗೆ ಸಹಿ ಮಾಡಲಾಯಿತು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ. ಇ. ಓ. ಮಸಕಜು ಯೋಷಿಮುರ (Masakazu Yoshimura), ಗೀತಾಂಜಲಿ ಕಿರ್ಲೋಸ್ಕರ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಒಡಂಬಡಿಕೆಯನ್ವಯ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ 3300 ಕೋಟಿ ರೂ. ಹೂಡಿಕೆ ಮಾಡಲಿದ್ದು 2000 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ
Facebook
Twitter
LinkedIn
Telegram
WhatsApp
Email
Print