ರಾಜ್ಯಕ್ಕೆ ಅಗತ್ಯವಾಗಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಪತ್ರ
ಬೆಂಗಳೂರು,ಜು.25: ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಪೂರೈಸುವಂತೆ ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಪ್ರಸಕ್ತ ಮುಂಗಾರಿನಲ್ಲಿ ಕೇಂದ್ರ ಸರ್ಕಾರ 11.17 ಲಕ್ಷ ಮೆಟ್ರಿಕ್ ಟನ್ ಹಂಚಿಕೆ ಮಾಡಿದೆ.
ಆದರೆ ಕರ್ನಾಟಕ ಇಲ್ಲಿಯವರೆಗೆ ಕೇವಲ 5.16 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸ್ವೀಕರಿಸಿದೆ ಎಂದು ತಿಳಿಸಿದ್ದಾರೆ. ಜುಲೈವರೆಗೂ 6.8 ಲಕ್ಷ ಮಟ್ರಿಕ್ ಟನ್ ರಸಗೊಬ್ಬರದ ಅಗತ್ಯವಿರುವುದಾಗಿ ಮುಖ್ಯಮಂತ್ರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.