ಬೆಂಗಳೂರು: ಸಂಸದರಾದ ಶ್ರೀಮತಿ ಅಪರಾಜಿತಾ ಸಾರಂಗಿ, ಶ್ರೀಮತಿ ಸುನಿತಾ ದುಗ್ಗಲ್, ಶ್ರೀಮತಿ ರಂಜಿತಾ ಕೋಲಿ, ಶ್ರೀಮತಿ ಲಾಕೆಟ್ ಚಟರ್ಜಿ ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಆಶಾ ಲಾಕ್ರಾ ಅವರ ನಿಯೋಗವು ಬೆಳಗಾವಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ, ಬೆತ್ತಲಾಗಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಯ ಮಾಹಿತಿ ಸಂಗ್ರಹಿಸಿತು.
ಕೇಂದ್ರದ ಈ ತಂಡಕ್ಕೆ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಡಾ.ರಾಜೇಶ ನೆರ್ಲಿ, ಬೆಳಗಾವಿ ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಶ್ಮಾ ಪಾಟೀಲ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ, ಮಾಜಿ ಎಂ.ಎಲ್.ಸಿ ಮಹಾಂತೇಶ ಕವಟಗಿಮಠ, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ಮುಖಂಡರಾದ ಬಸವರಾಜ ಹುಂದ್ರಿ ಹಾಗೂ ಪವನ ಕತ್ತಿ ಅವರು ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಈ ಅಮಾನವೀಯ ಕೃತ್ಯದ ಕುರಿತ ಮಾಹಿತಿಗಳನ್ನು ನೀಡಿದರು.
Facebook
Twitter
LinkedIn
Telegram
WhatsApp
Email
Print