ಬಳ್ಳಾರಿ: ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸಲು ಅಪೆಕ್ಸ್ ಬ್ಯಾಂಕಿನ ಪ್ರತಿನಿಧಿಯನ್ನಾಗಿ ಬಳ್ಳಾರಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರು. ಬಿಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅವರಿಗೆ ನೇಮಕದ ಆದೇಶ ಪತ್ರವನ್ನು ರವಾನೆ ಮಾಡಿದ್ದಾರೆ.
ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯಲ್ಲಿ ಅಪೆಕ್ಸ್ ಬ್ಯಾಂಕಿನ ಪ್ರತಿನಿಧಿಯಾಗಿ ಈ ಹಿಂದೆ ನಾಮ ನಿರ್ದೇಶನಗೊಂಡಿದ್ದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ವ್ಯವಸ್ಥಾಪಕ ಜಗದೀಶ್ ಎಲ್. ಇವರ ನಾಮ ನಿರ್ದೇಶನವನ್ನು ಆಡಳಿತಾತ್ಮಕ ಕಾರಣದಿಂದ ವಾಪಸ್ಸು ಪಡೆಯಲಾಗಿದೆ ಮತ್ತು ಅವರ ಬದಲಿಗೆ ನಾರಾ ಭರತ್ ರೆಡ್ಡಿ ಅವರನ್ನು ಕೂಡಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅಪೆಕ್ಸ್ ಬ್ಯಾಂಕಿನ ಪ್ರತಿನಿಧಿಯಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ನಮೂದಿಸಲಾಗಿದೆ.
Facebook
Twitter
LinkedIn
WhatsApp
Email
Print
Telegram