ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ  ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆ ಜಾರಿಗೆ

ಬೆಂಗಳೂರು : ಕಲ್ಯಾಣ‌ ಕರ್ನಾಟಕ‌ ರಾಜ್ಯ ರಸ್ತೆ ಸಾರಿಗೆ ನಿಗಮವು ( KKRTC) ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯವನ್ನ ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ ತನ್ನ ನಿಗಮದ ಸಿಬ್ಬಂದಿಗಳಿಗಾಗಿ ಸಂಸ್ಥೆಯಿಂದ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿರುತ್ತದೆ.

 

ಅದರ‌ ಮುಂದುವರೆದ ಭಾಗವಾಗಿ ಮತ್ತೊಂದು ಮಹತ್ವದ ಯೋಜನೆಯಾದ ಪ್ರೀಮಿಯಂ ರಹಿತ ರೂ.1.20 ಕೋಟಿ ವಿಮಾ ಯೋಜನೆಗೆ  ಇಂದು ರಾಮಲಿಂಗಾ ರೆಡ್ಡಿ, ಸಾರಿಗೆ ಹಾಗೂ ಮುಜರಾಯಿ ಸಚಿವರ ಘನ ಉಪಸ್ಥಿತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ  ರಾಚಪ್ಪ (ಕ. ಆ.ಸೇ), ಹಾಗೂ  ನವನೀತ್ ಕುಮಾರ್ , ಕರ್ನಾಟಕ  ವಲಯ ಮುಖ್ಯಸ್ಥರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ರವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಸಚಿವರು, ಸಾರಿಗೆ ನಿಗಮದ ಸಿಬ್ಬಂದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ  ದಿನಾಂಕ:21-12-2023 ರಂದು ಯೂನಿಯನ್ ಬ್ಯಾಕ್ ಆಫ್ ಇಂಡಿಯಾ ರವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಂಡಿರುತ್ತದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರರಿಸಿದ ಯೂನಿಯನ್ ಬ್ಯಾಂಕ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

 

 

ಸದರಿ ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ ರೂ.1.20 ಕೋಟಿಯ ಅಪಘಾತ ವಿಮೆ ಹಣ ದೊರಕಲಿದೆ. 

ನೌಕರರು ಶಾಶ್ವತ ಅಂಗನ್ಯೂನ್ಯತೆ / ಭಾಗಶಃ ಶಾಶ್ವತ ಅಂಗನ್ಯೂನ್ಯತೆ ಒಳಗಾದಲ್ಲಿ ರೂ.1 ಕೋಟಿಗಳನ್ನು ಪಡೆಯಬಹುದಾಗಿದ್ದು, ಡೆಬಿಟ್ ಕಾರ್ಡ ಮೇಲೆ ರೂ.15 ಲಕ್ಷಗಳ ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿರುತ್ತದೆ.  ಸದರಿ ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ ರೂ.5 ಲಕ್ಷಗಳು ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ ರೂ.1.20 ಕೋಟಿಗಳ ಅಪಘಾತ ವಿಮೆ ಸಾರಿಗೆ ನೌಕರರಿಗೆ  ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ  ತರಲಾಗಿದೆ.  ಈ ಸಂದರ್ಭದಲ್ಲಿ ಶ್ರೀ.ಎಸ್. ಭರತ್ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಡಾ. ಕೆ .ನಂದಿನಿ ದೇವಿ ಭಾಆಸೇ, ನಿರ್ದೇಶಕರು ( ಸಿ&ಜಾ) , ಕೆ ಎಸ್ ಆರ್ ಟಿ ಸಿ ಹಾಗೂ

 

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪರವಾಗಿ ವೆಂಕಟ್ ಸುದೀರ ಚೀದೆಲ್ಲ, ಪ್ರಾದೇಶಿಕ ಮುಖ್ಯಸ್ಥರು ಕಲಬುರಗಿ ಹಾಗೂ ನಾಗಭೂಷಣ. ಜಿ.ಆರ್. ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸಿ.ಆರ್.ಸಿ. ಬೆಂಗಳೂರು, ನಾಗರಾಜ್ ದೇಶನೂರು, ಮುಖ್ಯ ವ್ಯವಸ್ಥಾಪಕರು ಸಿ.ಆರ್.ಸಿ. ಬೆಂಗಳೂರು ಹಾಜರಿದ್ದರು.

Facebook
Twitter
LinkedIn
Telegram
Email
WhatsApp
Print

Leave a Comment

Your email address will not be published. Required fields are marked *

Translate »
Scroll to Top