ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬAಧಿಸಿದAತೆ ಮೂವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.
ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬAಧ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಪರಮೇಶ್ವರ್ ಅವರು, ಕಾರಾಗೃಹದ ಮುಖ್ಯ ಅಧೀಕ್ಷಕ ಸುರೇಶ್, ಜೈಲು ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸಿದ್ದಾರೆ.
ಅಲ್ಲದೆ, ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಇರಲಿದ್ದಾರೆ.



