ಬೆಂಗಳೂರು: ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದು, ಹಾಲಿ ಮುಖ್ಯಮಂತ್ರಿಯೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ಏನು ತಪ್ಪೆಂದು ಪ್ರಶ್ನಿಸಿದ್ದಾರೆ.
2028 ರಲ್ಲಿ ಸಿದ್ದರಾಮಯ್ಯ ಅವರ ಐದು ವರ್ಷಗಳ ಅವಧಿ ಪೂರ್ಣಗೊಂಡ ನಂತರ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬಹುದು ಎಂಬ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರ ಇತ್ತೀಚಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಪ್ರತಿಕ್ರಿಯೆ ನೀಡುವಾಗ ಈ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 2 ವರ್ಷ 6 ತಿಂಗಳು ಪೂರ್ಣಗೊಳ್ಳುತ್ತಿದ್ದು, ನವೆಂಬರ್ ನಲ್ಲಿ ಸರ್ಕಾರದ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ಊಹಾಪೆÇೀಹಗಳಿತ್ತು.
ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ “ತುಂಬಾ ಸಂತೋಷ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆದರೆ ಏನು ತಪ್ಪು? ಮುಖ್ಯಮಂತ್ರಿ ಅಲ್ಲಿದ್ದಾರೆ. ಅವರು ಇರಲಿ. ನಮಗೆ ದುಃಖವಿಲ್ಲ. ನಾವು ಒಟ್ಟಿಗೆ ಮಾಡುತ್ತಿದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ನಾವು ಒಗ್ಗಟ್ಟಿನಿಂದ ಮುಂದುವರಿಯುತ್ತೇವೆ” ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್‍ನಲ್ಲಿ, ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕೆಲವು ಸಮಯದಿಂದ ಮಾತುಕತೆ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವಿನ “ಅಧಿಕಾರ ಹಂಚಿಕೆ” ಒಪ್ಪಂದವನ್ನು ಉಲ್ಲೇಖಿಸಲಾಗಿದೆ.
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ತಪ್ಪೇನು? ಸಿಎಂ ಹುದ್ದೆ ಕನಸು ಕೈ ಬಿಟ್ಟ ಡಿಸಿಎಂ?



