ಬಳ್ಳಾರಿ : ನಗರದ ಗಡಿಗಿ ಚೆನ್ನಪ್ಪ ವೃತ್ತದಿಂದ ರೈಲ್ವೆ ಕೆಳಸೇತುವೆ ರಸ್ತೆಯ ವರೆಗೆ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿ ಮುಕ್ತಾಯಗೊಂಡಿದ್ದು, ನ.21 ರಿಂದ ನಗರ ಸಾರಿಗೆ ಬಸ್ ನಿಲ್ದಾಣದ (ಹಳೇ ಬಸ್ ನಿಲ್ದಾಣ) ಮೂಲಕ ಬಸ್ ಗಳು ಸಂಚರಿಸಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.



