ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

Kannada Nadu
By Kannada Nadu 1
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ  ನಿಧನ

ಮುಂಬೈ : ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ಬಾಲಿವುಡ್ ಹೀ ಮ್ಯಾನ್’ ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು.
ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಅವರ ಸಾವಿನ ವದಂತಿಗಳು ಹರಡಿದ್ದು, ನಂತರ ಕುಟುಂಬ ಈ ಸುದ್ದಿಯನ್ನು ನಿರಾಕರಿಸಿತ್ತು.ವಿಲೇ ಪಾರ್ಲೆ ಸ್ಮಶಾನಕ್ಕೆ ಧರ್ಮೇಂದ್ರ ಕುಟುಂಬ ಹಾಗೂ ಬಾಲಿವುಡ್ ನಟ ಅಮೀರ್ ಖಾನ್ ಸೇರಿದಂತೆ ಮತ್ತಿತರರು ಆಗಮಿಸುತ್ತಿದ್ದಾರೆ.

ಅವರು ಶೋಲೆ, ಚುಪ್ಕೆ ಚುಪ್ಕೆ, ಯಮ್ಲಾ ಪಗ್ಲಾ ದೀವಾನಾ, ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಮುಂತಾದ ಅನೇಕ ಸೂಪರ್ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಆಕ್ಷನ್ ಚಲನಚಿತ್ರಗಳಲ್ಲಿನ ಅವರ ಪ್ರಮುಖ ಪಾತ್ರಗಳಿಂದಾಗಿ ಅವರಿಗೆ “ಆಕ್ಷನ್ ಕಿಂಗ್” ಮತ್ತು “ಹೀ-ಮ್ಯಾನ್” ಎಂಬ ಹೆಸರುಗಳು ದಕ್ಕಿವೆ.

ರಾಜಕೀಯ ಜೀವನ : 2004 ರಿಂದ 2009 ರವರೆಗೆ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ರಾಜಸ್ಥಾನದ ಬಿಕಾನೇರ್ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭೆಯ ಸದಸ್ಯರಾಗಿದ್ದರು.
ಗೌರವಗಳು : 2012 ರಲ್ಲಿ, ಭಾರತ ಸರ್ಕಾರದಿಂದ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣವನ್ನು ಪಡೆದಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";