ಮೇಷ ರಾಶಿ: ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಕೋಪಕ್ಕೆ ಗುರಿಯಾಗುತ್ತೀರಿ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಕೈಗೊಂಡ ಕಾರ್ಯಗಳು ಕಠಿಣ ಪರಿಶ್ರಮದಿಂದ ಪೂರ್ಣಗೊಳ್ಳುತ್ತವೆ. ಸ್ಥಿರಾಸ್ತಿ ವಿಷಯದಲ್ಲಿ ಹಿರಿಯರೊಂದಿಗೆ ಭಿನ್ನಭಿಪ್ರಾಯಗಳು ಇರುತ್ತವೆ. ಮಕ್ಕಳ ಶೈಕ್ಷಣಿಕ ವಿಷಯಗಳು ನಿರುತ್ಸಾಹಗೊಳಿಸುತ್ತದೆ.
ವೃಷಭ ರಾಶಿ : ಸಹೋದರರೊಂದಿಗಿನ ವಿವಾದಗಳು ನಿವಾರಣೆಯಾಗುತ್ತವೆ. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು, ಲಾಭವನ್ನು ಪಡೆಯುತ್ತೀರಿ. ಪ್ರಮುಖ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುತ್ತವೆ. ಅಗತ್ಯಕ್ಕೆ ಇತರರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ.
ಮಿಥುನ ರಾಶಿ : ಹೊಸ ವ್ಯವಹಾರಗಳು ಅಲ್ಪ ಲಾಭದಾಯಕವಾಗಿರುತ್ತವೆ .ನಿರುದ್ಯೋಗ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳ ಒತ್ತಡ ಹೆಚ್ಚಾಗುತ್ತದೆ. ಕಣ್ಣಿನ ಸಂಬಂಧಿತ ಕಾಯಿಲೆಗಳು ಸ್ವಲ್ಪಮಟ್ಟಿಗೆ ನೋವಿನಿಂದ ಕೂಡಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಹಣಕಾಸಿನ ಪರಿಸ್ಥಿತಿ ಗೊಂದಲಮಯವಾಗಿರುತ್ತದೆ .ದೈವಿಕ ಚಿಂತನೆ ಹೆಚ್ಚಾಗುತ್ತದೆ.
ಕಟಕ ರಾಶಿ: ಮಕ್ಕಳ ಶೈಕ್ಷಣಿಕ ವಿಷಯಗಳು ತೃಪ್ತಿಕರವಾಗಿ ಸಾಗುತ್ತವೆ. ವ್ಯಾಪಾರ-ವ್ಯವಹಾರಗಳು ನಿರೀಕ್ಷೆಯಂತೆ ಸಾಗುತ್ತವೆ. ಸಮಾಜದಲ್ಲಿ ಗೌರವಕ್ಕೆ ಕೊರತೆ ಇರುವುದಿಲ್ಲ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ದೂರದ ಬಂಧುಗಳ ಆಗಮನ ಸಂತಸ ತರುತ್ತದೆ.
ಸಿಂಹ ರಾಶಿ : ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಸಾಲಗಾರರ ಒತ್ತಡ ಹೆಚ್ಚಾಗುತ್ತದೆ. ಹೊಟ್ಟೆಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ವ್ಯಾಪಾರದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ವಿವಾದಗಳಿಂದ ದೂರವಿರುವುದು ಉತ್ತಮ.
ಕನ್ಯಾ ರಾಶಿ: ಸಮಾಜದ ಪ್ರಮುಖ ವ್ಯಕ್ತಿಗಳಿಂದ ವಿಶೇಷ ಬೆಂಬಲ ದೊರೆಯುತ್ತದೆ. ಮಕ್ಕಳ ವಿವಾಹ ಪ್ರಯತ್ನಗಳು ಉತ್ತಮ ಫಲಿತಾಂಶವನ್ನು ನೀಡುತ್ತವೆ. ಹಣಕಾಸಿನ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಮನೆಯಲ್ಲಿ ಮಕ್ಕಳ ಶುಭ ಕಾರ್ಯದ ಬಗ್ಗೆ ಪ್ರಸ್ತಾಪವಿರುತ್ತದೆ. ಬಂಧು ಮಿತ್ರರ ನೆರವಿನಿಂದ ಮಹತ್ವದ ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ.
ತುಲಾ ರಾಶಿ : ಉದ್ಯೋಗದಲ್ಲಿ ದೀರ್ಘಕಾಲದಿಂದ ಇದ್ದ ಸಮಸ್ಯೆಗಳು ಬಗೆಹರಿಯುತ್ತವೆ. ವ್ಯಾಪಾರ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಮನೆಯ ಹೊರಗೆ ಅನುಕೂಲಕರ ವಾತವಾರಣವಿರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳೊಂದಿಗೆ ಮುಂದುವರಿಯುವುದು ಉತ್ತಮ. ಬಂಧುಗಳಲ್ಲಿ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ವೃಶ್ಚಿಕ ರಾಶಿ : ವ್ಯವಹಾರದಲ್ಲಿ ಇತರರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ.ವೃತ್ತಿಪರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ವಿಫಲವಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ಸಣ್ಣ ಪುಟ್ಟ ವಿವಾದಗಳಿರುತ್ತವೆ. ಕೈಗೊಂಡ ಕೆಲಸಗಳು ಮಧ್ಯದಲ್ಲಿ ನಿಲ್ಲುತ್ತವೆ . ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.
ಧನುಸ್ಸು ರಾಶಿ : ವೃತ್ತಿ ವ್ಯವಹಾರದಲ್ಲಿ ಗೊಂದಲ ಉಂಟಾಗುತ್ತದೆ. ನಿರುದ್ಯೋಗಿಗಳಿಗೆ ಹೆಚ್ಚಿನ ಕಷ್ಟದಿಂದ ಅಲ್ಪ ಫಲಿತಾಂಶ ದೊರೆಯುತ್ತದೆ.ಉದ್ಯೋಗದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ.ದೂರದ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೆಲವು ವ್ಯವಹಾರಗಳು ಸಮಸ್ಯಾತ್ಮಕವಾಗಿರುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.
ಮಕರ ರಾಶಿ : ಉದ್ಯೋಗದಲ್ಲಿ ಅಧಿಕಾರಿಗಳಿಂದ ಗೌರವ ಹೆಚ್ಚಾಗುತ್ತದೆ.ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು.ಪ್ರಯಾಣದಲ್ಲಿ ಹೊಸ ಪರಿಚಯಗಳು ಉಂಟಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಸಂಗಾತಿಯ ಸಲಹೆಗಳು ಕೂಡಿ ಬರುತ್ತವೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತದೆ.
ಕುಂಭ ರಾಶಿ : ಬಂಧು ಮಿತ್ರರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ.ವ್ಯವಹಾರದಲ್ಲಿ ಶತ್ರುಗಳ ಸಮಸ್ಯೆಗಳಿಂದ ಬುದ್ಧಿವಂತಿಕೆಯಿಂದ ಹೊರಬರುತ್ತೀರಿ. ಮನೆಯ ಹೊರಗೆ ಅನುಕೂಲಕರವಾಗಿರುತ್ತದೆ. ಹಣಕಾಸಿನ ವಿಚಾರಗಳು ಅನುಕೂಲಕರವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ. ಆಪ್ತ ಸ್ನೇಹಿತರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ.
ಮೀನ ರಾಶಿ : ಹೊಸ ವಸ್ತು ಮತ್ತು ವಾಹನಗಳನ್ನು ಖರೀದಿಸುತ್ತೀರಿ. ದೂರದ ಸ್ನೇಹಿತರಿಂದ ಶುಭ ಸುದ್ಧಿ ದೊರೆಯುತ್ತದೆ. ಉದ್ಯೋಗದಲ್ಲಿ ಉತ್ತಮ ಕಾರ್ಯನಿರ್ವಹಣೆಯಿಂದ ಅಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ನಿರ್ಣಾಯಕ ಸಮಯದಲ್ಲಿ ಒಳ್ಳೆಯ ಚಿಂತನೆಯ ಜ್ಞಾನದಿಂದ ಮುನ್ನಡೆಯುತ್ತೀರಿ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ.