ನಿಧಿ ಒಪ್ಪಿಸಿದ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ನೆರವು ನೀಡುವೆವು: ಹೆಚ್ ಕೆ ಪಾಟೀಲ

Kannada Nadu
ನಿಧಿ ಒಪ್ಪಿಸಿದ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ನೆರವು ನೀಡುವೆವು: ಹೆಚ್ ಕೆ ಪಾಟೀಲ

ಗದಗ: ಲಕ್ಕುಂಡಿಯಲ್ಲಿ ಇತ್ತೀಚೆಗೆ ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಪ್ರಾಮಾಣಿಕವಾಗಿ ಹಿಂದಿರುಗಿಸಿದ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಸಚಿವ ಹೆಚ್ ಕೆ ಪಾಟೀಲ ತಿಳಿಸಿದರು.

ಪತ್ತೆಯಾದ ನಿಧಿಯಲ್ಲಿ 466 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 634 ಗ್ರಾಂ ತಾಮ್ರದ ವಸ್ತುಗಳು ಸೇರಿವೆ, ಇದನ್ನು ಜಿಲ್ಲಾಡಳಿತ ತನ್ನ ವಶಕ್ಕೆ ತೆಗೆದುಕೊಂಡಿದೆ. ಇದು ಬೆಳಕಿಗೆ ಬರಲು ಕಾರಣನಾದ 14 ವರ್ಷದ ಪ್ರಜ್ವಲ್ ರಿತ್ತಿ ಪ್ರಾಮಾಣಿಕತೆ ಅನುಕರಣೀಯ ಎಂದು ಸಚಿವ ಎಚ್.ಕೆ.ಪಾಟೀಲ ಶ್ಲಾಘಿಸಿದರು.

ನಿಧಿಗೆ ಸಂಬAಧಿಸಿದ ವಿಷಯ ಮುಖ್ಯಮಂತ್ರಿ ಅವರ ಗಮನಕ್ಕೆ ಬಂದಾಗ, ನಿಧಿ ಎಷ್ಟೇ ಇರಲಿ. ಪ್ರಾಮಾಣಿಕವಾಗಿ ಅದನ್ನು ಸರ್ಕಾರಕ್ಕೆ ಒಪ್ಪಿಸಿದ ಬಾಲಕನ ನಡೆ ನಿಧಿಗಿಂತಲೂ ದೊಡ್ಡದೆಂದು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಪಾಟೀಲ್ ತಿಳಿಸಿದ್ದಾರೆ. ಜ.26ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ರಿತ್ತಿ ಕುಟುಂಬದವರನ್ನು ಜಿಲ್ಲಾಡಳಿತ ಸನ್ಮಾನಿಸಲಿದೆ. ನೆರವು ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಿದ್ದು, ಈ ಮಾಹಿತಿಯನ್ನು ಅಂದೇ ಪ್ರಕಟಿಸಲಾಗುವುದು ಎಂದರು.

ರಾಷ್ಟ್ರಕೂಟರು, ಚಾಲುಕ್ಯರು ಆಳ್ವಿಕೆಯ ಐತಿಹಾಸಿಕ ಹಿನ್ನೆಲೆಯುಳ್ಳ ಲಕ್ಕುಂಡಿ ವಿಶಿಷ್ಟ ಸ್ಥಳ. ಲಕ್ಕುಂಡಿಯನ್ನು ವಿಶ್ವ ಪರಂಪರೆಯ ತಾಣವೆಂದು ಘೋಷಿಸಲು ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಈಗ ಸಿಕ್ಕಿರುವ ನಿಧಿಯನ್ನು ವಸ್ತುಸಂಗ್ರಹಾಲಯದಲ್ಲಿ ಇಡಲಾಗುವುದು. ಲಕ್ಕುಂಡಿಯ ಪ್ರಾಚ್ಯಾವಶೇಷ ಸಂಗ್ರಹ ಅಭಿಯಾನ ನಡೆಸಿದಾಗ ಗ್ರಾಮಸ್ಥರು ಈಗಾಗಲೇ 1,100ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳನ್ನು ಒಪ್ಪಿಸಿದ್ದಾರೆ ಎಂದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";