ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ ೨೪ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಯುವಕನರ‍್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ. ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕರ‍್ಪೊರೇಟರ್ ಪುತ್ರಿ ನಿರಂಜನ ಹಿರೇಮಠ ಪುತ್ರಿ ಎಂದು ತಿಳಿದುಬಂದಿದೆ.
ಕೊಲೆಯ ನಂತರ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ಫಯಾಜ್ ಎಂಬಾತನನ್ನು ಬೆಳಗಾವಿ ಜಿಲ್ಲೆಯ ಸೌದತ್ತಿಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ಸಂತ್ರಸ್ತೆಯ ಸೀನಿಯರ್ ಕಾಲೇಜಿನಲ್ಲಿಯೇ ಓದುತ್ತಿದ್ದನು. ಕೊಲೆಯ ನಂತರ ಆರೋಪಿ ಕೈಯಲ್ಲಿ ಚಾಕು ಹಿಡಿದು ಸ್ಥಳದಿಂದ ತೆರಳಿದ್ದಾರೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನೇಹಾಳನ್ನು ಸಹಪಾಠಿಗಳು ಮತ್ತು ಅಧ್ಯಾಪಕರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ದುಃಖತಪ್ತ ಪೋಷಕರಿಗೆ ಸಾಂತ್ವನ ಹೇಳಿದರು.
ನೇಹಾ ಬಿವಿಬಿಯಲ್ಲಿ ಎಂಸಿಎ ೧ನೇ ರ‍್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಲವು ತಿಂಗಳಿಂದ ಆರೋಪಿ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನು. ಇತ್ತೀಚೆಗೆ ಆಕೆಗೆ ಪ್ರಪೋಸ್ ಮಾಡಿದ್ದನ್ನು ಸಂತ್ರಸ್ತೆ ತಿರಸ್ಕರಿಸಿದ್ದಳು. ಆಕೆಯ ನಡೆಯಿಂದ ಕುಪಿತಗೊಂಡ ಆರೋಪಿ ನೇಹಾಳನ್ನು ಕೊಲೆ ಮಾಡಲು ಮುಂದಾಗಿದ್ದ. ತನ್ನ ಪ್ರಸ್ತಾಪವನ್ನು ತಿರಸ್ಕರಿಸಿದ ಹುಡುಗಿಯನ್ನು ಕೊಲೆ ಮಾಡುವುದಾಗಿ ಆರೋಪಿ ತನ್ನ ಸ್ನೇಹಿತರ ಬಳಿ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಪ್ರೇಮ ನಿರಾಕರಣೆ ಪ್ರಕರಣದಂತೆ ತೋರುತ್ತಿದೆ. ಕೊಲೆಯ ಉದ್ದೇಶದ ಕುರಿತು ಹೆಚ್ಚಿನ ವಿವರಗಳನ್ನು ಪಡೆಯಲು ನಾವು ನೇಹಾಳ ಸ್ನೇಹಿತರು ಮತ್ತು ಸಂಬಂಧಿಕರ ವಿಚಾರಣೆ ನಡೆಸುತ್ತಿದ್ದೇವೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏತನ್ಮಧ್ಯೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಎಬಿವಿಪಿಯ ನಗರ ಘಟಕ, ಬಿಜೆಪಿ ವಿದ್ಯರ‍್ಥಿ ಘಟಕ ಕಾಲೇಜು ಎದುರು ಪ್ರತಿಭಟನೆ ನಡೆಸಲು ನರ‍್ಧರಿಸಿದೆ.