ಶಿವಮೊಗ್ಗ: ಹುಬ್ಬಳ್ಳಿಯ ಎಂಸಿಎ ವಿದ್ಯರ‍್ಥಿನಿ ನೇಹಾ ಹಿರೇಮಠ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತ ವಿದ್ಯರ‍್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ರ‍್ಕಾರ ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ನರ‍್ಧರಿಸಲಾಗಿದೆ ಎಂದು ಹೇಳಿದರು.
ನಮ್ಮ ಆಡಳಿತ ಅವಧಿಯಲ್ಲಿ ಕಡಿಮೆ ಅಪರಾಧ ಪ್ರಕರಣಗಳು ನಡೆದಿವೆ. ನಮ್ಮ ಆಡಳಿತ ಅವಧಿಯಲ್ಲಿ ೧೩೯೦ ಪ್ರಕರಣಗಳು ನಡೆದಿವೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ನಡೆದಿವೆ. ನಮ್ಮ ಆಡಳಿತದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಹೇಳಿದರು.
Facebook
Twitter
LinkedIn
Telegram
WhatsApp
Email
Print