ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ಆದೇಶ

ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದರ‍್ಗದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕರ‍್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕರ‍್ಟ್ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ ಆದೇಶಿಸಿದೆ. ಇನ್ನು ೪ ತಿಂಗಳಲ್ಲಿ ತನಿಖೆ ಪರ‍್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

ಡಾ. ಶ್ರೀ ಶಿವಮರ‍್ತಿ ಮುರುಘಾ ಶರಣರು ಎಸ್ಜೆಎಂ ವಿದ್ಯಾಪೀಠದಲ್ಲಿನ ವಿದ್ಯರ‍್ಥಿನಿಯರಿಗೆ ಲೈಂಗಿಕ ದರ‍್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕರ‍್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. 

ಬಳಿಕ ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕರ‍್ಟ್ ಮೆಟ್ಟಿಲೇರಿದ್ದರು. ರ‍್ಜಿ ವಿಚಾರಣೆ ನಡೆಸಿದ ಕರ‍್ಟ್, ಮುರುಘಾ ಶ್ರೀ ಆಡಳಿತಕ್ಕೆ ನರ‍್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ರ‍್ಕಾರಕ್ಕೆ ಸೂಚನೆ ನೀಡಿತ್ತು.

Facebook
Twitter
LinkedIn
Telegram
WhatsApp
Print
Print

Leave a Comment

Your email address will not be published. Required fields are marked *

Translate »
Scroll to Top