ನೇಹಾ ಹತ್ಯೆ: ಸಿಬಿಐಗೆ ವಹಿಸುವಂತೆ ಕೇಳಲು ಬಿಜೆಪಿಯವರಿಗೆ ನೈತಿಕತೆ ಇಲ್ಲ, ಸಿಐಡಿ ತನಿಖೆ ಚುರುಕು- ಸಿಎಂ ಸಿದ್ದರಾಮಯ್ಯ

ಬೀದರ್: ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ. ಈಗ ಹುಬ್ಬಳ್ಳಿ ವಿದ್ಯರ‍್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ. ಆಕೆಯ ಕುಟುಂಬಕ್ಕೆ ಶೀಘ್ರವೇ ನ್ಯಾಯ ಒದಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೀದರ್ ನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕ ಹಕ್ಕು ಇದೆ, ಹಿಂದೆ ಬಿಜೆಪಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐ ವಹಿಸಿದೆಯೇ ಎಂದು ಪ್ರಶ್ನಿಸಿದರು.

ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ರ‍್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದರು.

ನಾನು ಹಿಂದೆ ಅಧಿಕಾರದಲ್ಲಿದ್ದ ಸಂರ‍್ಭದಲ್ಲಿ ಪ್ರಕರಣಗಳನ್ನು ಸಿಬಿಐ (ಅಃI) ಗೆ ವಹಿಸಿದ್ದೇನೆ. ಬಿಜೆಪಿಯವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ರ‍್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ರ‍್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.

ಇಂದು ನೇಹಾ ನಿವಾಸಕ್ಕೆ ಸಿಎಂ: ಮೊನ್ನೆ ಏಪ್ರಿಲ್ ೧೮ರಂದು ಸಹಪಾಠಿಯಿಂದ ಹತ್ಯೆಗೀಡಾದ ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯರ‍್ಥಿನಿ ನೇಹಾ ಹಿರೇಮಠ ನಿವಾಸಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅವರ ತಂದೆ ನಿರಂಜನ್ ಹಿರೇಮಠ, ತಾಯಿ ಗೀತಾ ಹಿರೇಮಠ ಅವರಿಗೆ ಸಾಂತ್ವನ ಹೇಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನೇಹಾ ನಿವಾಸ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಕಸಿದುಕೊಂಡು ಸಂಪತ್ತು ಹಂಚುವ ಬಗ್ಗೆ ಮೋದಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ರೂ., ೨ ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ಈಡೇರಿಸಿದರೇ? ಅಗತ್ಯವಸ್ತುಗಳ ಬೆಲೆಯನ್ನು ಮೋದಿಯವರು ಕಡಿಮೆ ಮಾಡಿದ್ದಾರೆಯೇ ಎಂದು ಸಿಎಂ ಪ್ರಶ್ನಿಸಿದರು.

ಮುಸ್ಲಿಂ ಸಮುದಾಯಕ್ಕೆ ೪% ಮೀಸಲಾತಿ ಮುಂದುವರೆದಿದೆ: ಕಾಂಗ್ರೆಸ್ ಪಕ್ಷ ಎಸ್‌ಸಿ, ಎಸ್‌ಟಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಮೋದಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.೪ ರಷ್ಟು ಮೀಸಲಾತಿ ೧೯೯೪ ರಿಂದ ಜಾರಿಗೆ ಬಂದಿತ್ತು. ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆದಿದ್ದಕ್ಕೆ ಈ ರ‍್ಗ ಸುಪ್ರಿಂ ಕರ‍್ಟ್ ಮೊರೆ ಹೋಯಿತು. ಆ ಸಂರ‍್ಭದಲ್ಲಿ ಬಿಜೆಪಿ ರ‍್ಕಾರ ಸುಪ್ರೀಂ ಕರ‍್ಟ್ ನ ಮುಂದೆ ೪%ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top