ರಾಜ್ಯದಲ್ಲಿ ‘ಲವ್ ಜಿಹಾದ್’ ಹೆಚ್ಚುತ್ತಿದ್ದು, ಎಸ್‌ಐಟಿ ರಚಿಸಿ: ಸರ್ಕಾರಕ್ಕೆಸಿಟಿ ರವಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ರ‍್ಕಾರ ಎಸ್ಐಟಿ ತನಿಖೆ ನಡೆಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ರ‍್ನಾಟಕ ಕೇರಳದ ಹಾದಿಯಲ್ಲಿ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಅಪ್ರಾಪ್ತೆಯನ್ನು ಮುಸ್ಲಿಂ ಯುವಕ ರ‍್ಭಿಣಿಯನ್ನಾಗಿಸಿರುವ ಹೇಯ ಕೃತ್ಯ ವರದಿಯಾಗಿದೆ. ‘ಕಾಂಗ್ರೆಸ್ ರ‍್ಕಾರ ಇದೆ ಎಂಬ ಧರ‍್ಯ, ಜಿಹಾದಿ ಮನಸ್ಥಿತಿಯ ಕ್ರಿಮಿನಲ್ ಗಳನ್ನು ಉತ್ತೇಜಿಸುತ್ತಿದೆ’ ಎಂಬ ಆತಂಕ ಶಾಂತಿಪ್ರಿಯ ಕರುನಾಡ ಜನತೆಯನ್ನು ಕಾಡುತ್ತಿದೆ. ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದೆ. ಕಣ್ಣೆದುರೇ ಮೂಲಭೂತವಾದಿ ಪುಂಡರು ಅಟ್ಟಹಾಸ ಮೆರೆಯುತ್ತಲೇ ಇದ್ದರೂ ಓಲೈಕೆ ರಾಜಕಾರಣಕ್ಕೆ ಜೋತುಬಿದ್ದಿರುವ ಕಾಂಗ್ರೆಸ್ ರ‍್ಕಾರ ಉದ್ದೇಶ ಪರ‍್ವಕ ನಿಷ್ಕ್ರೀಯತೆ ತೋರುತ್ತಿದೆ, ರಾಕ್ಷಸೀ ಪ್ರವೃತ್ತಿ ಮೆರೆಯುತ್ತಿರುವವರ ವಿರುದ್ಧ ಮೆದು ಧೋರಣೆ ಅನುಸರಿಸುತ್ತಿದೆ. ಇದರಿಂದ ಹೆಣ್ಣು ಮಕ್ಕಳ ಮೇಲೆ ನಿರಂತರ ಕ್ರರ‍್ಯ ಸರಣೀ ರೂಪದಲ್ಲಿ ಎಗ್ಗಿಲ್ಲದೇ ಸಾಗಿದೆ. ಹೆಣ್ಣು ಹೆತ್ತವರ ಆಕ್ರಂದನ ಅರಣ್ಯರೋಧನವಾಗಿದೆ, ಧೃತರಾಷ್ಟ್ರ ನಡವಳಿಕೆಯ ಕಾಂಗ್ರೆಸ್ ರ‍್ಕಾರದ ವಿರುದ್ಧ ರ‍್ಮಯುದ್ಧದಲ್ಲಿ(ಲೋಕಸಮರ) ಜನ ಪಾಠ ಕಲಿಸಬೇಕಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡರಾದ ಸಿ.ಟಿ.ರವಿ ಅವರು ಮಾತನಾಡಿ, ಇಂತಹ ಘಟನೆಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರ‍್ನಾಟಕದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ.ಇದು ಕೇವಲ ಕಾಕತಾಳೀಯವಲ್ಲ. ಕೆಲವು ದೇಶ ವಿರೋಧಿ ಗುಂಪುಗಳ ಉದ್ದೇಶಪರ‍್ವಕವಾಗಿ ನಡೆಸುತ್ತಿರುವ ಪ್ರಯತ್ನವಾಗಿದೆ. ಕೆಲವು ಗುಂಪುಗಳು ಷರಿಯಾ ಕಾನೂನನ್ನು ಅನುಸರಿಸದವರನ್ನು ಗುರಿಯಾಗಿಸುತ್ತಿವೆ.

 

ಮೊಘಲ್ ದೊರೆ ಔರಂಗಜೇಬ್ ಆಳ್ವಿಕೆಯಲ್ಲಿ ಬಲವಂತವಾಗಿ ಧರ‍್ಮಿಕ ಮತಾಂತರಗಳನ್ನು ಮಾಡಲಾಗಿತ್ತು ಈಗ ಕೆಲವು ಗುಂಪುಗಳು ಲವ್ ಜಿಹಾದ್ ಅನುಸರಿಸುತ್ತಿವೆ. ಈ ಗುಂಪುಗಳು ಈಗ ಒಂದು ಹೆಜ್ಜೆ ಮುಂದೆ ಹೋಗಿ ಮತ ಜಿಹಾದ್‌ಗೆ ಕರೆ ನೀಡಿವೆ. ಹಾಗಾಗಿ ರ‍್ಕಾರ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top