ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಜನರ ಅಭಿಲಾಷೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು.

ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಕಳೆದ 10 ವರ್ಷಗಳಲ್ಲಿ ಮಾಡಿರುವ ಕೆಲಸ ಕಾರ್ಯಗಳನ್ನು ಇವತ್ತು ಈ ನಾಡಿನ ಮತ್ತು ದೇಶದ ಮನೆಮನೆಗಳಲ್ಲಿ ಮಾತನಾಡುತ್ತಿದ್ದಾರೆ. ಎಂದು ವಿವರಿಸಿದರು. ಬಿ.ವೈ.ರಾಘವೇಂದ್ರ ಅವರು 15 ವರ್ಷಗಳಲ್ಲಿ ಅತ್ಯಂತ ಕ್ರಿಯಾಶೀಲ ಸಂಸದರಾಗಿ ಗರಿಷ್ಠ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿರೋಧ ಪಕ್ಷದವರೂ ಕೂಡ ರಾಘಣ್ಣ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಹೊಗಳುತ್ತಿದ್ದಾರೆ ಎಂದು ನುಡಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು 5 ವರ್ಷಕ್ಕೆ ಒಮ್ಮೆ ಘೋಷಿಸುತ್ತಾರೆ. 5 ವರ್ಷಕ್ಕೊಮ್ಮೆ ಅವರು ಚುನಾವಣೆಗಾಗಿ ಕಾಣಿಸಿಕೊಳ್ಳುತ್ತಾರೆ. ಚುನಾವಣೆ ಬಳಿಕ ನಾಪತ್ತೆಯಾಗುತ್ತಾರೆ. ನಿಮ್ಮ ರಾಘಣ್ಣ ಅವರು ಜನಾನುರಾಗಿಯಾಗಿದ್ದಾರೆ. ಕಾರ್ಯಕರ್ತರ ಜೊತೆ ಪ್ರೀತಿ, ವಿಶ್ವಾಸ ಇಟ್ಟುಕೊಂಡವರು. ಅಕ್ಕಪಕ್ಕದ ಜಿಲ್ಲೆಯಲ್ಲೂ ಅವರ ಅಭಿವೃದ್ಧಿ ಕಾರ್ಯವನ್ನು ಜನರು ಮೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದರು.

ಶಿಕಾರಿಪುರ ತಾಲ್ಲೂಕು ಮಾತ್ರವಲ್ಲದೆ, ಶಿವಮೊಗ್ಗ ಜಿಲ್ಲೆಯಲ್ಲಿ ವಾತಾವರಣ ಬಿಜೆಪಿ ಪರವಾಗಿದ್ದು, ಇದರಿಂದ ಸಂತೋಷವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ದೇಶದ ಅಭಿವೃದ್ಧಿ ಮತ್ತು ಸುರಕ್ಷತೆ ದೃಷ್ಟಿಯಿಂದ ಮತ್ತೊಮ್ಮೆ ಮೋದಿಜೀ ಅವರು ಪ್ರಧಾನಿ ಆಗಬೇಕೆಂದು ಆಶಿಸಿ ಎನ್‍ಡಿಎ ಕೂಟ ಸೇರಿದ್ದಾರೆ. 

ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ಗರಿಷ್ಠ ಶ್ರಮ ಹಾಕುವ ಮೂಲಕ 28ಕ್ಕೆ 28 ಸ್ಥಾನಗಳಲ್ಲಿ ಗೆಲುವನ್ನು ತಂದು ಕೊಡಬೇಕಿದೆ ಎಂದು ಮನವಿ ಮಾಡಿದರು. ಗರಿಷ್ಠ ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಿ ಎಂದು ವಿನಂತಿಸಿದರು. ಪಕ್ಷದ ಪ್ರಮುಖರು ಇದ್ದರು.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top