ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಉದ್ಘಾಟಿಸಿದ ಶಾಸಕ ಗಾಲಿ ಜನಾರ್ಧನ ರೆಡ್ಡಿ

Kannada Nadu
ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಉದ್ಘಾಟಿಸಿದ ಶಾಸಕ ಗಾಲಿ ಜನಾರ್ಧನ ರೆಡ್ಡಿ

ಸಂಡೂರು:ಇಂದು ಸಂಡೂರು ವಿಧಾನಸಭಾ ಕ್ಷೇತ್ರದ ಏಳುಬೆಂಚಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ “ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026” ರ ಸಂಡೂರು ನಗರ ಮತ್ತು ಗ್ರಾಮೀಣ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗದ ಉದ್ಘಾಟನೆಯಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಸಿದ್ಧಾಂತ, ಪಕ್ಷದ ಪಡೆದು ಬಂದ ಹಾದಿ ಹಾಗೂ ಸಂಘಟನೆಯಲ್ಲಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿ, “ಸಂಘಟನೆಯೇ ಶಕ್ತಿ, ಕಾರ್ಯಕರ್ತರೇ ನಮ್ಮ ಆಸ್ತಿ” ಎಂಬ ಧ್ಯೇಯದೊಂದಿಗೆ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಎಸ್. ಟಿ ಮೋರ್ಚಾ ಅಧ್ಯಕ್ಷರಾದ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಮೋಕಾ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಬಾಳೇಕಾಯಿ, ಮಾಜಿ ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾದ ವಿಕಾಸ್ ಪುತ್ತೂರು, ಉಪಾಧ್ಯಕ್ಷರುಗಳಾದ ಜಿ.ಟಿ ಪಂಪಾಪತಿ ಹಾಗೂ ಹುಡೇದ್ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಡವಿ ಸ್ವಾಮಿ, ಜಿಸಿಬಿ ರಾಮಕೃಷ್ಣ, ತಿರುಮಲ, ಬಿ.ರಾಮಕೃಷ್ಣ, ಶರಣುಗೌಡ, ಕುಮಾರ್ ನಾಯಕ್ ಹಾಗೂ ಇನ್ನಿತರ ಮುಖಂಡರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";