ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರು ಉತ್ತರ ಮತ್ತು ದಕ್ಷಿಣ ಭಾರತದ ಜನರ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ದಕ್ಷಿಣದ ರಾಜ್ಯಗಳಲ್ಲಿ ಚುನಾವಣೆ ಮುಗಿದಿದೆ ಎಂಬ ಕಾರಣಕ್ಕೆ, ಕೃತಜ್ಞತೆಯಿಲ್ಲದ ಪ್ರಧಾನಿ ಈಗ ದಕ್ಷಿಣದ ರಾಜ್ಯಗಳ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ದಕ್ಷಿಣ ಮತ್ತು ಉತ್ತರ ಭಾರತದ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬರೆದಿದ್ದಾರೆ.
‘ನಾವು ಕರ್ನಾಟಕವನ್ನು ಭಾರತದ ಮಗಳು ಎಂದು ಪರಿಗಣಿಸುತ್ತೇವೆ, ಭಾರತವು ಯಾರ ಮೇಲೂ ಭೇದಭಾವ ಮಾಡಿಲ್ಲ. ಆದರೆ, ಮೋದಿಯಂತಹವರು ವಿಷ ಉಗುಳುತ್ತಿದ್ದಾರೆ. ನಾವು ಪ್ರತಿ ರಾಜ್ಯದ ಜನರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಮತ್ತು ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದರು.
ಲೋಕಸಭೆ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಿಂಧೆ ಅವರು ನಮ್ಮ ರ‍್ಕಾರದ ಪತನದ ಬಗ್ಗೆ ಮಾತನಾಡುವ ಬದಲು ತಮ್ಮ ರ‍್ಕಾರವನ್ನು ಪತನವಾಗದಂತೆ ರಕ್ಷಿಸಿಕೊಳ್ಳಬೇಕು. ಶಿಂಧೆ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಕರ್ನಾಟಕದಲ್ಲಿ ರಾಜಕೀಯ ವಾತಾವರಣ ಕಾಂಗ್ರೆಸ್‌ಗೆ ಅನುಕೂಲಕರವಾಗಿದೆ ಎಂದು ಹೇಳಿದರು. ಬೇರೆ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಅವರು, ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು.