ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಪಾಸ್ಪೋರ್ಟ್ ರದ್ದುಗೊಳಿಸುವಂತೆ ಈಗಾಗಲೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದ ಕೂಡಲೇ ಪಾಸ್ಪೋರ್ಟ್ ರದ್ದಾಗಬೇಕು ಎಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಬಗ್ಗೆ ಯಾವುದೇ ಅನುಕಂಪ ಇಲ್ಲ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ತನಿಖೆ ನಡೆಸುವುದಕ್ಕಿಂತ ಹೆಚ್ಚಾಗಿ ರಾಜಕೀಯದ ಮೇಲೆ ಕೇಂದ್ರೀಕರಿಸಿದೆ ಎಂದು ಅವರು ಆರೋಪಿಸಿದರು.
Facebook
Twitter
LinkedIn
Telegram
WhatsApp
Email
Print