ದಾವಣಗೆರೆ: ಮಟ್ಕಾ ಆಡಿಸುತ್ತಿದ್ದ ಆರೋಪ ಮೇಲೆ ವ್ಯಕ್ತಿಯರ‍್ವನನ್ನು ಚನ್ನಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಆದರೆ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗಲೇ ಮೃತಪಟ್ಟಿದ್ದು ಇದನ್ನು ಲಾಕಪ್ ಡೆತ್ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮಟ್ಕಾ ಆಡಿಸುತ್ತಿದ್ದ ಆರೋಪದ ಹಿನ್ನಲೆ ಚನ್ನಗಿರಿ ಠಾಣೆ ಪೊಲೀಸರು ಟಿಪ್ಪು ನಗರ ನಿವಾಸಿಯಾಗಿದ್ದ ೩೦ ರ‍್ಷದ ಅದಿಲ್ ಎಂಬಾತನನ್ನು ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಆದರೆ ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಮೃತಪಟ್ಟಿದ್ದನು.
ಅದಿಲ್ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಠಾಣೆಯ ಮುಂಭಾಗದಲ್ಲಿ ನೂರಾರು ಜನರು ಜಮಾಯಿಸಿದ್ದು, ಇದು ಲಾಕಪ್ ಡೆತ್ ಎಂದು ಆರೋಪಿಸುತ್ತಿದ್ದಾರೆ.
ಘಟನೆ ನಂತರ ಠಾಣೆಗೆ ಭೇಟಿ ನೀಡಿದ ಚನ್ನಗಿರಿ ಡಿವೈಸ್ಪಿ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸಿದ್ದು ಸದ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಿಗುವಿನ ವಾತಾವರಣ ನರ‍್ಮಾಣವಾಗಿದೆ.