ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದರು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರಿಂದ ಎಚ್ಚೆತ್ತ ರಾಜ್ಯ ರ್ಕಾರ, ಡೆತ್ನೋಟ್ನಲ್ಲಿ ನಮೂದಿಸಿದ್ದ ಮೂರು ಜನ ಅಧಿಕಾರಿಗಳಲ್ಲಿ ಇಬ್ಬರಾದ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.
ಯಾರನ್ನೂ ರಕ್ಷಣೆ ಮಾಡುವ ಪ್ರೆಶ್ನೆಯೇ ಇಲ್ಲ-ಸಚಿವ ನಾಗೇಂದ್ರ:
ಈ ವೇಳೆ ಮಾತನಾಡಿದ ಸಚಿವ ನಾಗೇಂದ್ರ, ‘ ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರೆಶ್ನೆಯೇ ಇಲ್ಲ. ನಮ್ಮ ರ್ಕಾರದ ಹಣ ನಾವು ದುರುಪಯೋಗ ಆಗಲು ಬಿಡುವುದಿಲ್ಲ. ೮೮ ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಾಸ್ ಪಡೆಯುತ್ತಿದ್ದಾರೆ. ಜೊತೆಗೆ ಈ ಪ್ರಕರಣವನ್ನ ರಾಜ್ಯ ರ್ಕಾರ ಮೊನ್ನೆಯೇ ಸಿಐಡಿಗೆ ವಹಿಸಿದ್ದು, ಸೂಕ್ಷ್ಮವಾಗಿ ತನಿಖೆ ಮಾಡುತ್ತಿದೆ ಎಂದರು.
ಶಿವಮೊಗ್ಗ ಮತ್ತು ಬೆಂಗಳೂರು ಎರಡು CID ಅಧಿಕಾರಿಗಳು ತನಿಖೆ:
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಬೆಂಗಳೂರು ಎರಡು ಅIಆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ರ್ಕಾರದ ಪರ್ವ ಅನುಮತಿ ಪಡೆದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಎಂ.ಡಿ , ಸಿಇಓ ಹಾಗೂ ಎಲ್ಲಾ ನರ್ದೇಶಕರು ಸೇರಿದಂತೆ ೬ ಜನ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಈIಖ ದಾಖಲಿಸಿದ್ದಾರೆ. ಎಫ್. ಎಸ್. ಎಲ್ ಮತ್ತು ಸಿ. ಐ. ಡಿ ವರದಿ ಬಂದ ತಕ್ಷಣವೇ ಕಾನೂನು ರೀತಿಯಲ್ಲಿ ಎಲ್ಲರಿಗೂ ಕಠಿಣ ಶಿಕ್ಷೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.