ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್  ಪ್ರತಿಭಟನೆ

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ, ಅಧಿಕಾರಿ ಆತ್ಮಹತ್ಯೆ ಹಿನ್ನೆಲೆ ಸಚಿವ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್  ಪ್ರತಿಭಟನೆ ನಡೆಸಿದೆ.

ಎಂಎಲ್ ಸಿ ರವಿಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ದುರ್ಗಮ್ಮನ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ರಾಯಲ್ ವೃತ್ತದಲ್ಲಿ ಸಂಚಾರ ತಡೆದು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.

ಇದೇ ವೇಳೇ ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಾಗೂ ಸಚಿವ ನಾಗೇಂದ್ರ ಪೋಟೋ ಅಂಟಿಸಿದ ಗೊಂಬೆ ಪ್ರತಿಕೃತಿ ದಹನ ಮಾಡಲಾಯಿತು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top