ಬಳ್ಳಾರಿ: ಸರಗಳ್ಳತನ ಮಾಡಿದ ಇಬ್ಬರು ಆರೋಪಿತರನ್ನು ಬಂಧಿಸಿದ್ದು, ಆರೋಪಿತರಿಂದ 295 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ದಿನೇ ದಿನೇ ಕಳವು ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತೆಯೇ ಬಳ್ಳಾರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಗಳ ಬೆನ್ನತ್ತಿದ ಪೊಲೀಸರು,
ಸರಗಳ್ಳತನ ಮಾಡಿದ ಮಂಜು, ರಾಮದಾಸ ಎಂಬ ಇಬ್ಬರು ಆರೋಪಿತರನ್ನು ಬಂಧಿಸಿದ್ದು, ಆರೋಪಿತರಿಂದ 17 ಲಕ್ಷ 70 ಸಾವಿರ ಮೌಲ್ಯದ 295 ಗ್ರಾಂ ಬಂಗಾರದ ಆಭರಣಗಳನ್ನು ಹಾಗೂ 01 ಲಕ್ಷ ಮೌಲ್ಯದ ಒಂದು ಟಿವಿಎಸ್ ಕಂಪನಿಯ ರೈಡರ್ ಮೋಟಾರ್ ಸೈಕಲ್ ಅವ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು ತಿಳಿಸಿದ್ದಾರೆ.
Facebook
Twitter
LinkedIn
Telegram
WhatsApp
Email
Print