ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಪರಿಷ್ಕರಣೆಯಾಗಿದೆ. ತಕ್ಷಣದಿಂದಲೇ ಪೆಟ್ರೋಲ್ ದರ 3 ರೂ ಮತ್ತು ಡೀಸೆಲ್ ದರ 3.05 ಪೈಸೆಯಷ್ಟು ಹೆಚ್ಚಳವಾಗಲಿದೆ ಎಂದು ಪೆಟ್ರೋಲಿಯಂ ಮಾರಾಟಗಾರರ ಸಂಘ ತಿಳಿಸಿದೆ.
ಗ್ಯಾರೆಂಟಿ ಯೋಜನೆಗಳನ್ನು ಸಂಪನ್ಮೂಲ ಕ್ರೋಢೀಕರಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.
ರಾಜ್ಯ ಸರ್ಕಾರ ಮಾರಾಟ ತೆರಿಗೆಯನ್ನು ಕ್ರಮವಾಗಿ 29.84% ಮತ್ತು 18.44% ರಷ್ಟು ಹೆಚ್ಚಳ ಮಾಡಿದ ಮಾಡಿದ ಹಿನ್ನೆಲೆಯಲ್ಲಿ
ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಜನ ಸಾಮಾನ್ಯರ ಜೇಬು ಸುಡಲಿದೆ.
ಸಂಪನ್ಮೂಲ ಕ್ರೋಢೀಕರಣ ಕುರಿತಂತೆ ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಮಹತ್ವದ ಸಭೆ ಕರೆದು ಚರ್ಚಿಸಿದ್ದರು. ದರ ಏರಿಕೆ ಕುರಿತು ಯಾವುದೇ ಸುಳಿವು ಬಿಟ್ಟುಕೊಡದೇ ವಾರಾಂತ್ಯದಲ್ಲಿ ದರ ಏರಿಕೆ ಮಾಡಲಾಗಿದೆ.
Facebook
Twitter
LinkedIn
Telegram
WhatsApp
Email
Print