ತುಮಕೂರು : ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ ಅವರು ಇಂದು ದೈವಾಧೀನರಾಗಿದ್ದಾರೆ.
ಮಮತ ಅವರು ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ ಹಿರಿಯ ಪತ್ರಕರ್ತ ಎಚ್ ಆರ್ ರವೀಶ್ , ಮಗ ಪ್ರಜ್ವಲ್ ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ನಾಳೆ ಆ.3 ಶನಿವಾರ ಮಧ್ಯಾಹ್ನ ನೆರವೇರಲಿದೆ. ಬೆಂಗಳೂರಿನ ಅವರ ಮನೆಯಲ್ಲಿ ಇಂದು ಸಂಜೆ 8 ಗಂಟೆಯಿಂದ ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.
ಅನಾರೋಗ್ಯ ಸಮಸ್ಯೆಯಿಂದ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಆರ್. ಆರ್.ಆಸ್ಪತ್ರೆಯಲ್ಲಿ
ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು
ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದು, ಅವರ ಕುಟುಂಬಸ್ಥರು ಸೇರಿದಂತೆ, ತುಮಕೂರು ವಾರ್ತಾ ಇಲಾಖೆಯ
ಸಿಬ್ಬಂದಿಗಳು ಕೂಡ ಶೋಕ ಸಮುದ್ರದಲ್ಲಿ ಮುಳುಗಿದ್ದಾರೆ.
ಅಂತೆಯೇ ತುಮಕೂರು ಕಾರ್ಯನಿರತ
ಪತ್ರಕರ್ತ ಸಂಘದವರು, ಜಿಲ್ಲಾ ಪತ್ರಕರ್ತರು ಸೇರಿದಂತೆ ರಾಜಕೀಯ ಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.