ಅಧಿಕಾರಿಗಳಿಗೆ ಹಣಕ್ಕಾಗಿ ಕಿರುಕುಳ ನೀಡುವುದೇ ರಾಜ್ಯ ಸರ್ಕಾರದ ಒನ್ ಲೈನ್ ಅಜೆಂಡಾ: ಸಿ.ಟಿ.ರವಿ

ಬೆಂಗಳೂರು : ಅಧಿಕಾರಿಗಳಿಗೆ ಹಣಕ್ಕಾಗಿ ಕಿರುಕುಳ ನೀಡುವುದೇ ರಾಜ್ಯ ಕಾಂಗ್ರೆಸ್  ಸರ್ಕಾರದ ಒನ್ ಲೈನ್ ಅಜೆಂಡಾ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು,  ಸಹಾಯಕ ಇಂಜಿನಿಯರ್ ಒಬ್ಬರು ತನಗೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಂದ ಜೀವ ಬೆದರಿಕೆ ಇದೆ, ದಯವಿಟ್ಟು ನನ್ನನ್ನು ಕಾಪಾಡಿ ಎಂದು ನ್ಯಾಯಾಲಯದಲ್ಲಿ ಅಂಗಲಾಚುತ್ತಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಅರಾಜಕತೆಯ ವ್ಯಾಪ್ತಿ ಎಷ್ಟರಮಟ್ಟಿಗೆ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಹಣಕ್ಕೆ ಬೇಡಿಕೆಯಿಟ್ಟು ಸಹಾಯಕ ಇಂಜಿನಿಯರ್‌ಗೆ ಜೀವ ಬೆದರಿಕೆ ಹಾಕಿರುವ  ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಕೂಡಲೇ ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕರ ಮಾತು ಕೇಳಿ ಪುಡಿರೌಡಿಯಂತೆ ವರ್ತಿಸಿ ಸಹಾಯಕ ಎಂಜಿಯರ್‌ಗೆ ಸುಪಾರಿ ಪಡೆದು ಕಿರುಕುಳ ನೀಡುತ್ತಿರುವ ಡಿವೈಎಸ್ಪಿ ಅವರನ್ನು ಸಹ ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Facebook
Twitter
LinkedIn
WhatsApp
Email
Telegram
Print

Leave a Comment

Your email address will not be published. Required fields are marked *

Translate »
Scroll to Top