ವಾಲೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಕಿಂಗ್ ಪಿನ್

ಬೆಂಗಳೂರು: ರಾಜ್ಯ ಸರ್ಕಾರದ ಅಸ್ತಿತ್ವವನ್ನೇ ಅಲುಗಾಡಿಸಿದ ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಪ್ರಮುಖ ಕಿಂಗ್ ಪಿನ್ ಮಾಜಿ ಸಚಿವ ಬಿ.ನಾಗೇಂದ್ರ ಎಂಬುದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ.

 

ಪ್ರಕರಣದ ತನಿಖೆ ನಡೆಸಿರು ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ವಿಶೇಷವೆಂದರೆ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಶಿವಮೊಗ್ಗ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾರ್ಜ್ಶೀಟ್ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹೆಸರನ್ನು ಉಲ್ಲೇಖ ಮಾಡದೆ ಕೇವಲ ಅಧಿಕಾರಿಗಳ ಪಾತ್ರ ಕುರಿತು ಉಲ್ಲೇಖ ಮಾಡಿತ್ತು.

ಇದಕ್ಕೆ ತದ್ವಿರುದ್ಧವಾಗಿ ಇ.ಡಿ ಮಾಜಿ ಸಚಿವ ಬಿ.ನಾಗೇಂದ್ರ, ಸತ್ಯನಾರಾಯಣ ವರ್ಮ ಅವರುಗಳೇ ಈ ಪ್ರಕರಣದ ಪ್ರಮುಖ ರೂವಾರಿಗಳೆಂಬುದನ್ನು ಪತ್ತೆ ಮಾಡಿದೆ.ಹೈದರಾಬಾದ್ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ 187 ಕೋಟಿ ರೂ. ಹಗರಣ ನಡೆದಿದೆ.

21 ಕೋಟಿ ರೂ.ಗಳನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಹಣ ವರ್ಗಾವಣೆ ನಡೆದಿದೆ ಎಂದು ಚಾರ್ಜ್ಶೀಟ್ನಲ್ಲಿ ಜಾರಿನಿರ್ದೇಶನಾಲಯ ಉಲ್ಲೇಖಿಸಿದೆ. ನಾಗೇಂದ್ರ ಅವರ ಸೂಚನೆಯಂತೆಯೇ ಅಕೌಂಟ್ ಓಪನ್ ಮಾಡಲಾಗಿದೆ ಎಂದು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದನಾಭ್ ಹೇಳಿಕೆ ಕೊಟ್ಟಿದ್ದಾರೆ.

ಶಾಂಗ್ರಿಲಾ ಹೋಟೆಲ್ನಲ್ಲಿನ ನಡೆದ ಸಭೆಯಲ್ಲಿ ನಾಗೇಂದ್ರ ಬಂದು-ಹೋಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಇದಿಷ್ಟೇ ಅಲ್ಲ, ಶಾಂಗ್ರಿಲಾ ಹೋಟೆಲ್ನಲ್ಲಿ ಮಹಜರು ಪ್ರಕ್ರಿಯೆ ವೇಳೆ ಅನೇಕ ಸಾಕ್ಷಿಗಳು ದೊರೆತಿವೆ.

ನಾಗೇಂದ್ರ, ಪಿಎ ದೇವೇಂದ್ರಪ್ಪ, ನೆಕ್ಕಂಟಿ ನಾಗರಾಜ್, ನಾಗೇಶ್ವರ್ ರಾವ್ ಸಭೆಯಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ನಾಗೇಂದ್ರ ಸೂಚನೆಯಂತೆಯೇ ಹಗರಣದಲ್ಲಿ ಭಾಗಿ ಎಂದು ಆರೋಪಿಗಳು ಹೇಳಿಕೆಕೊಟ್ಟಿದ್ದಾರೆ. ಹಾಗೇ ಮೃತ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ನಲ್ಲಿ ಸಚಿವ ಎಂಬುದು ಉಲ್ಲೇಖವಾಗಿದೆ.

ನಾಗೇಂದ್ರ ಆಪ್ತ ಹರೀಶ್ಗೆ ಪದನಾಭ್ 25 ಲಕ್ಷ ರೂ. ನೀಡಿರುವುದು ಕೂಡ ಬಯಲಾಗಿದೆ. ಹರೀಶ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಣ ಪಡೆದಿರೋ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಇಡಿ ದಾಳಿಯಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಅನೇಕ ದಾಖಲೆಗಳು ಸಿಕ್ಕಿವೆ.

 

ನಾಗೇಂದ್ರ-ದದ್ದಲ್ ಹೆಸರು ಇರಲಿಲ್ಲ:

ವಾಲೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಪೊಲೀಸರು 12 ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ಆಗಸ್ಟ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ , ಬಸನಗೌಡ ದದ್ದಲ್ ಅವರ ಹೆಸರನ್ನು ಉಲ್ಲೇಖಿಸಿರಲಿಲ್ಲ.

ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲೀಕಿ ನಿಗಮ ಎಂಡಿ ಪದನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು.

ಏನಿದು ಹಗರಣ?:

 

ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಎಂಜಿರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು.

Facebook
Twitter
LinkedIn
WhatsApp
Telegram
Email
Print
Pinterest

Leave a Comment

Your email address will not be published. Required fields are marked *

Translate »
Scroll to Top