ನೆನೆಗುದಿಗೆ ಬಿದ್ದಿದ್ದ ತುಮಕೂರು ರಾಯದುರ್ಗ ರೈಲ್ವೆ ಮಾರ್ಗ ಯೋಜನೆಗೆ ವೇಗ: ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು:  ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತುಮಕೂರು ರಾಯದುರ್ಗ ರೈಲ್ವೆ ಮಾರ್ಗ ಭೂಸ್ವಾಧಿನ ಪ್ರಕ್ರಿಯೆಯನ್ನು ಕೇವಲ 3 ತಿಂಗಳಲ್ಲಿ ಶೇ  90 ಕ್ಕಿಂತ ಹೆಚ್ಚು ಪೂರ್ಣಗೊಳಿಸಿ ರೈಲ್ವೆ ಯೋಜನೆಗಳಿಗೆ ವೇಗ ನೀಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅವರು ಚರ್ಚಿಸಿದರು. ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ರೂ.87 ಕೋಟಿ ಅನುದಾನ ನೀಡಲಾಗಿದ್ದು, ಈ ರೈಲ್ವೆ ನಿಲ್ದಾಣಕ್ಕೆ ಡಾ ಶ್ರೀ ಶ್ರೀ ಶ್ರೀ ಶಿವಕುಮಾರ್ ಮಹಾ ಸ್ವಾಮಿಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ.
ತುಮಕೂರು – ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಮಾನ್ಯ ಪ್ರಧಾನಮಂತ್ರಿಗಳಲ್ಲಿ ಕೇಂದ್ರ ಸಚಿವರಾದ ಸೋಮಣ್ಣ ಮನವಿ ಮಾಡಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ದಿಯ ಬಗ್ಗೆ ಚರ್ಚೆ ಮಾಡಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ದಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಿದರು.
ಬೆಂಗಳೂರು ಹೊರ ವರ್ತುಲ ರೈಲ್ವೆ, ವರ್ತುಲ ರೈಲ್ವೆ ಇತ್ಯಾದಿಗಳ ಬಗ್ಗೆ 2 ಸುತ್ತಿನ ಸಭೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದ್ದು, 3 ತಿಂಗಳಲ್ಲಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಕಾರ್ಯವೈಖರಿ ಬಗ್ಗೆ ಪ್ರಧಾನಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.
ರೈಲ್ವೆ ಇಲಾಖೆಯಲ್ಲಿನ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಅತ್ಯಂತ ಸಹಕಾರ ನೀಡಿದ ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರ ಸಹಕಾರ ಮನೋಭಾವನೆಯನ್ನು ಅತ್ಯಂತ ಗೌರವಪೂರ್ವಕವಾಗಿ ಕೇಂದ್ರ ಸಚಿವ ಸೋಮಣ್ಣನವರು ಪ್ರಧಾನಮಂತ್ರಿಯವರ ಭೇಟಿಯ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top