ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ದುಷ್ರ್ಮಿಗಳು ಮಧ್ಯರಾತ್ರಿ 12.20 ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ ೭.೩೦ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
ಶಾಲಾ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಶಾಲೆಯಲ್ಲಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಹುಸಿ ಬಾಂಬ್ ಇ-ಮೇಲ್ ಎಂದು ದೃಢವಾಗಿದೆ.
ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ಗಳು ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ಗಳು ಬಂದಿದ್ದವು. ಈ ಬಾಂಬ್ ಬೆದರಿಕೆ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲಿಂದ ಮೇಲೆ ಈ ರೀತಿಯಾದ ಬಾಂಬ್ ಬೆದರಿಕೆ ಇ-ಮೇಲ್ಗಳು ಬರುತ್ತಿದ್ದರೂ, ರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರ್ಮಿನಲ್ ೧ ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದರು.
ಅಪರಿಚಿತ ಆರೋಪಿ ವಿರುದ್ಧ ಮೇ ೨ ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
“ವಿಮಾನ ನಿಲ್ದಾಣದ ಇ-ಮೇಲ್ ಐಡಿಗೆ ಮೇಲ್ ಕಳುಹಿಸಲಾಗಿದೆ. ಬಾಂಬ್ಗಳನ್ನು ಇಟ್ಟಿದ್ದು, ಅವು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳುತ್ತವೆ. ಮೇಲ್ ಮಾಡಿದವನು ತಾನು ಭಯೋತ್ಪಾದಕ ಗುಂಪಿನಿಂದ ಬಂದವನು” ಅಂತ ಸಂದೇಶ ಕಳಿಸಿದ್ದಾನೆ ಎಂದು ರ್ಮಿನಲ್ ಮ್ಯಾನೇಜರ್ ಗೀತಾ ರಾಣಿ ಅವರು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ