ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ  ಬಾಂಬ್ ಬೆದರಿಕೆ ಇ-ಮೇಲ್  ಬಂದಿದೆ. ದುಷ್ರ‍್ಮಿಗಳು ಮಧ್ಯರಾತ್ರಿ 12.20  ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ ೭.೩೦ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

ಶಾಲಾ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಶಾಲೆಯಲ್ಲಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಹುಸಿ ಬಾಂಬ್ ಇ-ಮೇಲ್ ಎಂದು ದೃಢವಾಗಿದೆ.

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ಗಳು ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ಗಳು ಬಂದಿದ್ದವು. ಈ ಬಾಂಬ್ ಬೆದರಿಕೆ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲಿಂದ ಮೇಲೆ ಈ ರೀತಿಯಾದ ಬಾಂಬ್ ಬೆದರಿಕೆ ಇ-ಮೇಲ್ಗಳು ಬರುತ್ತಿದ್ದರೂ, ರ‍್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸರ‍್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರ‍್ಮಿನಲ್ ೧ ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರ‍್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದರು.

ಅಪರಿಚಿತ ಆರೋಪಿ ವಿರುದ್ಧ ಮೇ ೨ ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

 

ವಿಮಾನ ನಿಲ್ದಾಣದ ಇ-ಮೇಲ್ ಐಡಿಗೆ ಮೇಲ್ ಕಳುಹಿಸಲಾಗಿದೆ. ಬಾಂಬ್‌ಗಳನ್ನು ಇಟ್ಟಿದ್ದು, ಅವು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳುತ್ತವೆ. ಮೇಲ್ ಮಾಡಿದವನು ತಾನು ಭಯೋತ್ಪಾದಕ ಗುಂಪಿನಿಂದ ಬಂದವನು ಅಂತ ಸಂದೇಶ ಕಳಿಸಿದ್ದಾನೆ ಎಂದು ರ‍್ಮಿನಲ್ ಮ್ಯಾನೇಜರ್ ಗೀತಾ ರಾಣಿ ಅವರು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top