ಬೆಂಗಳೂರು: ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲ ಅಡ್ಡಪರಿಣಾಮ ಉಂಟಾಗಲಿದೆ ಎಂದು ಕೊರೊನಾ (ಅoಡಿoಟಿಚಿ) ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಇತ್ತೀಚೆಗೆ ಒಪ್ಪಿಕೊಂಡಿದೆ. ಇದು ಭಾರೀ ರ‍್ಚೆಗೆ ಕಾರಣವಾಗಿದೆ. ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಈಗ ಎರಡನ್ನೂ ಲಿಂಕ್ ಮಾಡುವ ಕೆಲಸ ಆಗುತ್ತಿದೆ. ಈ ಮಧ್ಯೆ ಪುನೀತ್ ರಾಜ್ಕುಮಾರ್ ಕುರಿತ ಪೋಸ್ಟ್ ಒಂದು ವೈರಲ್ ಆಗಿದೆ.
ಪುನೀತ್ ರಾಜ್ಕುಮಾರ್ ಅವರು ೨೦೨೧ರ ಅಕ್ಟೋಬರ್ ೨೯ರಂದು ನಿಧನ ಹೊಂದಿದರು. ಅವರು ಹೃದಯಾಘಾತಕ್ಕೆ ಒಳಪಟ್ಟು ಮೃತಪಟ್ಟರು. ಸಖತ್ ಫಿಟ್ ಆಗಿದ್ದ ಅವರು ನಿಧನ ಹೊಂದುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಈಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.
ಪುನೀತ್ ರಾಜ್ಕುಮಾರ್ ಅವರು ೨೦೨೧ರ ಏಪ್ರಿಲ್ ೭ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ‘ನೀವು ೪೫ ರ‍್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಎಂದು ಮನವಿ ಮಾಡಿದ್ದರು. ಇದಕ್ಕೆ ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯರ‍್ವ ಕಮೆಂಟ್ ಮಾಡಿದ್ದರು. ‘ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. ೪೫ ರ‍್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತು. ಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ. ಕೋವಿಶೀಲ್ಡ್ನಿಂದಲೇ ಪುನೀತ್ ಅವರ ರಕ್ತನಾಳದಲ್ಲಿ ಬ್ಲಡ್ ಕ್ಲಾಟ್ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.
ಆಸ್ಟ್ರಾಜೆನೆಕಾ ಕೋವಿಶೀಲ್ಡ್ ಹೆಸರಲ್ಲಿ ಲಸಿಕೆಯನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹೀಗಾಗಿ, ಈ ಬಗ್ಗೆ ರ‍್ಚೆ ಜೋರಾಗಿದೆ. ಕೋವಿಶೀಲ್ಡ್ಗಳಿಂದ ಬ್ಲಡ್ ಕ್ಲಾಟ್ ಆಗಲಿದ್ದು, ಇವುಗಳಿಂದ ಹೃದಯಸ್ಥಂಬನ ಅಥವಾ ಪರ‍್ಶವಾಯು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.