ಮನೆ ಇಲ್ಲದವರಿಗೆ ಸುವರ್ಣಾವಕಾಶ

ದಾವಣಗೆರೆ,28 : ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆಯಡಿ 2021-22 ನೇ ಸಾಲಿಗೆ ರಾಜೀವ್‍ಗಾಂಧಿ ವಸತಿ ನಿಗಮವು ಸಾಮಾನ್ಯ ವರ್ಗದವರಿಗೆ 49 ಹಾಗೂ ಅಲ್ಪಸಂಖ್ಯಾತ ವರ್ಗದವರಿಗೆ 57 ಸೇರಿದಂತೆ ಒಟ್ಟು 106 ಮನೆಗಳ ಗುರಿಯನ್ನು ನಿಗದಿಪಡಿಸಿದ್ದು. ಆಸಕ್ತಿವುಳ್ಳ ಅರ್ಹರು ಜ.31 ರ ಒಳಗೆ ಸೂಕ್ತ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ನಮೂನೆಯಲ್ಲಿ ಪುರಸಭೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಖಾಲಿ ನಿವೇಶನ ಹೊಂದಿರಬೇಕು, ಕುಟುಂಬ ವಾರ್ಷಿಕ ಆದಾಯ 87600/- ಮೀರಿರಬಾರದು, ಗುಡಿಸಲು ವಾಸಿಗಳು, ತಾತ್ಕಾಲಿಕ ಶೆಡ್, ಶಿಥಿಲಗೊಂಡ ಮನೆ, ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವವರು, ಒಂದು ಕೊಣೆಯಿಲ್ಲದ 04 ಕ್ಕಿಂತ ಹೆಚ್ಚು ಸದಸ್ಯರುಳ್ಳ ಕುಟುಂಬದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಚೇರಿಯಲ್ಲಿ ಆಶ್ರಯ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top