ಬೆಂಗಳೂರು : “ಕಾವೇರಿ ನದಿ ನೀರು ವಿಚಾರವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಳೆ ನವದೆಹಲಿಯಲ್ಲಿ ರಾಜ್ಯದ ಎಲ್ಲ ಸಂಸದರ ಸಭೆ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಈ ವಿಚಾರವಾಗಿ ಮಾಹಿತಿ ನೀಡಿದ ಅವರು ಹೇಳಿದ್ದಿಷ್ಟು;
“ಕಾವೇರಿ ನದಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು ಹಾಗೂ ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು, ಸಚಿವರಾದ ಚೆಲುವರಾಯಸ್ವಾಮಿ, ಮಹದೇವಪ್ಪ, ಹೆಚ್.ಕೆ ಪಾಟೀಲ್ ಹಾಗೂ ರಾಜ್ಯದ ಪ್ರತಿನಿಧಿಗಳು ದೆಹಲಿಗೆ ತೆರಳುತ್ತಿದ್ದೇವೆ. ನಾಳೆ ಎಲ್ಲಾ ಸಂಸದರ ಸಭೆ ನಡೆಯಲಿದ್ದು, ನಮ್ಮ ರಾಜ್ಯದ ರೈತರ ಹಿತ ಕಾಯಲು ಅಗತ್ಯ ಕೆಲಸ ಮಾಡುತ್ತೇವೆ.”
Facebook
Twitter
LinkedIn
WhatsApp
Telegram
Tumblr
Email