ದಿನಾಂಕ 21-1-2022 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯ ಮುಖ್ಯಾಂಶಗಳು:
- ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ
- ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯು ನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್ ನಲ್ಲಿ ಇದ್ದಾರೆ.
- ಬೆಂಗಳೂರನ್ನು ಹೊರತು ಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ.
- ಪಾಸಿಟಿವಿ ದರ ಶೇ. 19.94 ರಷ್ಟಿದೆ.
- ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ
ದರ ಶೇ. 16.57 ರಷ್ಟಿದೆ. - ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.
- ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್ಎ ಪ್ಲಾಂಟ್ ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.
- ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ ಎ ಪ್ಲಾಂಟ್ ಗಳು
ಕಾರ್ಯಾರಂಭಮಾಡಿವೆ. - ಸರಾಸರಿ ಮೂರು ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.
- ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.
- ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.
- ವಾರಾಂತ್ಯ ಕರ್ಫ್ಯೂ ವಿಧಿಸಿದರು ಕೂಡ ದೊಡ್ಡ ಪರಿಣಾಮ ಉಂಟಾಗಿಲ್ಲ. ಸೊಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ. 5 ರಿಂದ 6ರ ಮದ್ಯದಲ್ಲಿದೆ. ಚೇತರಿಸಿಕೊಳ್ಳುತ್ತಿರುವ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.
- ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ (peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
- ಜೊತೆಗೆ ಕೋವಿಡ್ 19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಗಮನಿಸಲಾಯಿತು.
- ಜನರ ಜೀವ ಮತ್ತು ಜೀವನ ನಿರ್ವಹಣೆ ಎರಡೂ ಸರಿದೂಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
- ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು:-
- ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರ
ವರೆಗೆ ಜಾರಿಯಲ್ಲಿರಲಿದೆ. - ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.
- ಆದ್ದರಿಂದ ಸಾರ್ವಜನಿಕಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ.
- ಮಾಲ್, ಹೋಟೆಲ್, ಬಾರ್, ಕ್ಲಬ್,ಪಬ್ ಗಳು ಶೇ. 50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಯಿತು. ಎರಡೂ ಲಸಿಕೆ ಪಡೆಯುವುದು ಕಡ್ಡಾಯ.