ಸಾರಿಗೆ ಬಸ್ ಹರಿದು ವಿದ್ಯಾರ್ಥಿ ಸಾವು

Kannada Nadu
ಸಾರಿಗೆ ಬಸ್ ಹರಿದು ವಿದ್ಯಾರ್ಥಿ ಸಾವು

ರಾಯಚೂರು : ವಿದ್ಯಾರ್ಥಿ ಮೇಲೆ ಸಾರಿಗೆ ಬಸ್ ಹರಿದು ಸ್ಥಳದಲ್ಲಿಯೇ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಗರ ಸ್ಟೇಷನ್ ರಸ್ತೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ.
ಬಸವರಾಜ್ ಅರಕೇರಾ(21) ಮೃತ ಪಟ್ಟ ಯವಕನಾಗಿದ್ದಾನೆ. ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ಎಂದು ತಿಳಿದು ಬಂದಿದೆ.
ರಜೆ ಹಿನ್ನೆಲೆಯಲ್ಲಿ ಕೇಟರಿಂಗ್ ಕೆಲಸಕ್ಕೆ ಆಟೋರಿಕ್ಷಾದಲ್ಲಿ ತೆರಳುತ್ತಿರುವಾಗ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ. ಹಿಂದಿನಿಂದ ವೇಗವಾಗಿ ಬಂದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಕುರಿತು ನಗರ ಸಂಚಾರ ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";