ಮುಖ್ಯಮಂತ್ರಿಗಳ ಜನಸ್ಪಂದನ – 02 ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳ ಸ್ವೀಕಾರ

ಬೆಂಗಳೂರು : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ  ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

 

ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126  ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. 

ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು

ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ  3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ,ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ-  ಆಡಳಿತ)  ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ – ಈ ಐದು ಇಲಾಖೆಗಳಲ್ಲಿ  ಯಾವುದೇ  ಅರ್ಜಿ ಸ್ವೀಕೃತವಾಗಿಲ್ಲ.

 

ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top