ಬೆಂಗಳೂರು: ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡಿರುವ ಫೋಟೊವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ. ಪಾದದ ಮೂಳೆ ಮುರಿದಿದೆ. ಆರು ವಾರಗಳ ಕಾಲ ದಿಗ್ಭಂಧನ’ ಎಂದು ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಅಮೆರಿಕಕ್ಕೆ ಹೋಗಿದ್ದ ಜಗ್ಗೇಶ್ ಅಲ್ಲಿಂದ ವಾಪಸ್ ಬರುವಾಗ ವಿಮಾನದಲ್ಲಿ ಆದ ಘಟನೆಯಿಂದ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವಿಮಾನ ಬೆಂಗಳೂರಿನಲ್ಲಿ ಭೂ ಸ್ಪರ್ಷ ಮಾಡುವ ಮುನ್ನ ಜರ್ಕ್ ಹೊಡೆದಿದ್ದರಿಂದ ಜಗ್ಗೇಶ್ ಕಾಲಿಗೆ ಪೆಟ್ಟಾಗಿದೆ ಎನ್ನಲಾಗುತ್ತಿದೆ.
Facebook
Twitter
LinkedIn
WhatsApp