ಶಿಶುವಾಗಿದ್ದಾಗಲೇ ಕನ್ನಡ ಬೆಳ್ಳಿ ತೆರೆಗೆ ಕಾಲಿಟ್ಟ ನಟ ಪುನೀತ್ ರಾಜ್ ಕುಮಾರ್..!

ಡಾ.ವರ ಪ್ರಸಾದ್ ರಾವ್ ಪಿವಿ
ಬೆಂಗಳೂರು
: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಂದು ನಿಧನರಾದರು. ಆರು ತಿಂಗಳ ಶಿಶುವಾಗಿದ್ದಾಗಲೇ ಪುನೀತ್ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದ್ದರು. 1976ನೇ ಇಸವಿಯಲ್ಲಿ ಪುನೀತ್ ರಾಜ್ ಕುಮಾರ್ರ್ ಅವರು ಡಾ. ರಾಜ್ ನಟನೆಯ ಪ್ರೇಮದ ಕಾಣಿಕೆ’ ಸಿನಿಮಾ ತೆರೆಕಂಡ ನಂತರ ಪುನೀತ್ ‘ಸನಾದಿ ಅಪ್ಪಣ್ಣ’ ಚಿತ್ರದಲ್ಲಿ ಮನೋಜ್ಞವಾಗಿ ಅಭಿನಯಿಸಿದ್ದರು. ನಂತರದಲ್ಲಿ ತಾಯಿಗೆ ತಕ್ಕ ಮಗ, ವಸಂತ ಗೀತಾ, ಭೂಮಿಗೆ ಬಂದ ಭಗವಂತ, ಭಾಗ್ಯವಂತ, ಹೊಸ ಬೆಳಕು ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಬಾಲ ಕಲಾವಿದನಾಗಿ ಪುನೀತ್ ಅದ್ಭುತವಾಗಿ ನಟಿಸಿದ್ದರು. ಈ ಸಮಯದಲ್ಲಿ ಪುನೀತ್ ಮಾಸ್ಟರ್ ಲೋಹಿತ್ ಆಗಿ ಪರಿಚಯಗೊಂಡಿದ್ದರು.


1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರಕ್ಕಾಗಿ ಪುನೀತ್ಗೆ ರಾಷ್ಟ್ರಪ್ರಶಸ್ತಿ ಒಲಿದು ಬಂದಿತ್ತು. ಚಲಿಸುವ ಮೋಡಗಳು ಹಾಗೂ ಎರಡು ಕನಸು ಚಿತ್ರದಲ್ಲಿ ಪುನೀತ್ ನಟನೆಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಕೂಡ ದೊರೆತಿತ್ತು. 2002ರಲ್ಲಿ ತೆರೆ ಕಂಡ ಅಪ್ಪು ಸಿನಿಮಾ ಮೂಲಕ ಪುನೀತ್ ಪೂರ್ಣ ಪ್ರಮಾಣದ ನಟನಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅಲ್ಲಿಂದ ಈವರೆಗೆ ಸುಮಾರು 25 ಸಿನಿಮಾಗಳಲ್ಲಿ ಪುನೀತ್ ನಟಿಸಿದ್ದಾರೆ. ಪ್ರೇಮದ ಕಾಣಿಕೆ ಸಿನಿಮಾ ತೆರೆಕಂಡು ಸುಮಾರು 45 ವರ್ಷಗಳು ಕಳೆದಿವೆ.
ಗಾಯಕ – ನಿರೂಪಕ- ನಿರ್ಮಾಪಕ

ಗಾಯಕನಾಗಿ ಸುಮಾರು ಐವತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಡಿರುವ ಪುನೀತ್, ಗಾಯನದಿಂದ ಬರುವ ಸಂಪೂರ್ಣ ಹಣವನ್ನು ಸಮಾಜಸೇವೆಗೆ ವಿನಿಯೋಗಿಸುತ್ತಾರೆ.ಕಿರುತೆರೆಯಲ್ಲಿ ನಿರೂಪಕರಾಗಿ ಕನ್ನಡದ ಕೋಟ್ಯಾಧಿಪತಿಯ ಎರಡು ಸೀಸನ್‌ಗಳನ್ನು ಮತ್ತು ಫ್ಯಾಮಿಲಿ ಪವರ್ ಎಂಬ ರಿಯಾಲಿಟಿ ಶೋಗಳನ್ನು ನಿರೂಪಿಸಿದ್ದಾರೆ. ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಮೊಟ್ಟಮೊದಲ ಅತಿಥಿಯಾಗಿ ಭಾಗವಹಿಸಿದ್ದು ವಿಶೇಷ. ಚಿತ್ರ ನಿರ್ಮಾಪಕರಾಗಿ ಕವುಲುದಾರಿ',ಮಯಾಬಜಾರ್’ ಎಂಬ ಚಿತ್ರಗಳನ್ನು ತಮ್ಮ ಹೋಮ್ ಬ್ಯಾನರ್‌ನಲ್ಲಿಯೇ ನಿರ್ಮಸಿರುವ ಪುನೀತ್ ತಮ್ಮ ಪ್ರೋಡಕ್ಸನ್ ಹೌಸ್ ಮೂಲಕ ಕಿರುತೆರೆ ಧಾರಾವಾಹಿ ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಅರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್ `ಬೆಂಗಳೂರು ಪ್ರೀಮೀಯರ್ ಪುಟ್‌ಬಾಲ್ ತಂಡದ ಒಡೆತನವನ್ನು ಹೊಂದಿದ್ದಾರೆ.ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು LED ಬಲ್ಬ್‌ಗಳ ರಾಯಭಾರಿಯಾಗಿ ಕೂಡ ಪ್ರಸ್ತುತರು. ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದರು. 1999 ರಲ್ಲಿ ಚಿಕ್ಕಮಗಳೂರಿನವರಾದ ಅಶ್ವಿನಿಯವರನ್ನು ಕೈಹಿಡಿದರು.ಈ ದಂಪತಿಗಳಿಗೆ ಧೃತಿ ಮತ್ತು ವಂದಿತಾ ಎಂಬ ಪುತ್ರಿಯರಿದ್ದಾರೆ.

ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್, ಪತ್ನಿಯೊಂದಿಗೆ ಎಚ್‌ಎಎಲ್‌ ಏರ್‌ಪೋರ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪತ್ನಿ ಅಶ್ವಿನಿಯೊಂದಿಗೆ ಭೇಟಿಯಾಗಿ ಡಾ.ರಾಜ್ ಜೀವನ ಚರಿತ್ರೆ ‘ಕಾಫಿ ಟೇಬಲ್’ ಅನ್ನು ಉಡುಗೊರೆಯಾಗಿ ನೀಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಹೇಳಲಾಗಿದೆ.ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.ಚಾಮರಾಜನಗರ ಹಾಗೂ ಬೆಂಗಳೂರಿನ ಸಾರ್ವಜನಿಕ ಸಭೆಗಳಲ್ಲಿ ಮೋದಿಯವರು ಡಾ.ರಾಜ್‌ಕುಮಾರ್ ಅವರನ್ನು ಸ್ಮರಿಸಿಕೊಂಡಿದ್ದರು. ಅವರನ್ನು ಪುನೀತ್ ಭೇಟಿಯಾದಾಗ, ಕನ್ನಡದ ಮೇರು ನಟನ ಗುಣಗಾನ ಮಾಡಿದ್ದಾಗಿ ಹೇಳಲಾಗಿದೆ.

Leave a Comment

Your email address will not be published. Required fields are marked *

Translate »
Scroll to Top