ರೇಣುಕಾಸ್ವಾಮಿ ಕುಟುಂಬಸ್ಥರ ಪರ ನಿಂತ ನಟಿ ರಮ್ಯಾ !

ರೇಣುಕಾಸ್ವಾಮಿ ಕುಟುಂಬಸ್ಥರ ಪರ ನಿಂತ ನಟಿ ರಮ್ಯಾ !

Kannada Nadu
ರೇಣುಕಾಸ್ವಾಮಿ ಕುಟುಂಬಸ್ಥರ ಪರ ನಿಂತ ನಟಿ  ರಮ್ಯಾ  !

ರೇಣುಕಾಸ್ವಾಮಿ ಕುಟುಂಬಸ್ಥರ ಪರ ನಿಂತ ನಟಿ ರಮ್ಯಾ!

ಸದ್ಯ ಸುಪ್ರೀಂ ಕೋರ್ಟ್‌ನಲ್ಲಿರುವ ನಟ ದರ್ಶನ್‌ ಜಾಮೀನು ಕೇಸ್‌ಗೆ ಸಂಬಂಧಿಸಿದಂತೆ ನಟಿ ರಮ್ಯಾ (Actress Ramya) ಅವರು ಹೇಳಿಕೆ ಒಂದನ್ನು ನೀಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ

Ramya vs Darshan fans ದರ್ಶನ್ ಅಭಿಮಾನಿಗಳಿಗೆ ಖಡಕ್ ವಾರ್ನಿಂಗ್..!

 

ಬೆಂಗಳೂರು: ಸದ್ಯ ಸುಪ್ರೀಂ ಕೋರ್ಟ್‌ನಲ್ಲಿರುವ ನಟ ದರ್ಶನ್‌ ಜಾಮೀನು ಕೇಸ್‌ಗೆ ಸಂಬಂಧಿಸಿದಂತೆ ನಟಿ ರಮ್ಯಾ (Actress Ramya) ಅವರು ಹೇಳಿಕೆ ಒಂದನ್ನು ನೀಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. ರೇಣುಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಸಿದಂತೆ ಮಾತನಾಡಿ, ಆತನ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣʼ ಎಂದು ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ನಟಿ ರಮ್ಯಾ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ನಿಂದಿಸಿದ್ದರು.

ಪೋಸ್ಟ್‌ನಲ್ಲೇನಿದೆ?

ʻಕೇಸ್‌ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರ, ʻತೆರೆಯಮೇಲಷ್ಟೇ ಅಲ್ಲ ನಿಜ ಜೀವನದಲ್ಲೂ ರಮ್ಯಾ ಹಿರೋಯಿನ್‌ ಎಂದು ಬರೆಯಲಾಗಿದೆ. ನಂತರ ಮೊತ್ತೊಂದು ಪೋಸ್ಟ್‌ನಲ್ಲಿ ನಟಿ ಡಿ ಬಾಸ್‌ ಫ್ಯಾನ್ಸ್‌ಗಳಿಗೆ ಓಪನ್‌ ಚಾಲೆಂಜ್‌ ಹಾಕಿದ್ದಾರೆ. ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ… ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್‌ಗಳೇ ಸಾಕ್ಷಿʼಎಂದು ಬರೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳು ಬಂಧನವಾಗಿದ್ದರು. ಜೈಲುವಾಸದ ನಂತರ ಎಲ್ಲಾ ಆರೋಪಿಗಳು ಜಾಮೀನು ಪಡೆದು ಆಚೆ ಬಂದಿದ್ದರು. ಇದೀಗ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದೆ. ಹೈಕೋರ್ಟ್‌ ರೀತಿ ತರಾತುರಿಯಲ್ಲಿ ಆದೇಶ ನೀಡುವುದಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ಹೇಳಿದೆ. ಒಂದೂವರೆ ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿ ಕಡೆಯಲ್ಲಿ ಇತರೇ ಆರೋಪಿಗಳ ಪರ ವಕೀಲರ ಮಾಹಿತಿ ಕೇಳಿದೆ. ಎಲ್ಲ ಆರೋಪಿಗಳ ಪರ ವಕೀಲರು ಲಿಖಿತ ವಾದ ಮಂಡಿಸಬಹುದು. ಒಂದು ವಾರದಲ್ಲಿ ಮೂರು ಪುಟಗಳ ಮಾಹಿತಿ ನೀಡಬೇಕು. ಬಳಿಕ ಆದೇಶ ನೀಡುವುದಾಗಿ ಕೋರ್ಟ್‌ ಹೇಳಿದೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";