ಹೈದರಾಬಾದ್ : ತೆಲುಗಿನ ಖ್ಯಾತ ಚಿತ್ರ ಸಾಹಿತಿ ಸಿರಿವೆನ್ನೆಲ ಸೀತಾರಾಮಶಾಸ್ತ್ರಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿನ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೆಲವು ದಿನಗಳಿಂದ ಅವರು ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು ಎಂದು ಅವರ ಕುಟುಂಬದರು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚಿಕಿತ್ಸೆಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಹೆಲ್ತ್ ಬುಲೇಟಿನ್ತಿ ಳಿಸಿದೆ. ಸಿರಿವೆನ್ನೆಲ ಸೀತಾರಾಮಶಾಸ್ತ್ರಿ ಅವರು ತೆಲುಗಿನಲ್ಲಿ ೩ ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಬರೆದಿದ್ದಾರೆ. ಅವರಿಗೆ ೧೧ ಸಲ ನಂದಿ ಪ್ರಶಸ್ತಿ ದೊರೆತಿರುವುದು ವಿಶೇಷ.
