ಅಜಾನ್: ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಲು ಸೂಚನೆ

ಕಲಬುರಗಿ : ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕು ಎಂದು ಕಾನೂನು ಇದೆ. ಡಿಜಿಯವರು ಸುತ್ತೋಲೆ ಹೊರಡಿಸಿದ್ದಾರೆ ಎಂದರು.

Leave a Comment

Your email address will not be published. Required fields are marked *

Translate »
Scroll to Top