ಪಂಚೇಂದ್ರಿಯಗಳನ್ನು ಕಳೆದುಕೊಂಡ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಎಚ್ಚರಿಕೆ

ದೇವನಹಳ್ಳಿ,ಜ,4 : ಎಮ್ಮೆ ಚರ್ಮದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪ್ರತಿಭಟನೆ ಮತ್ತು ಪಾದಯಾತ್ರೆ ಮೂಲಕ ಬಡಿದೆಬ್ಬಿಸುವ ಕೆಲಸ ಕಾಂಗ್ರೆಸ್ ಪಕ್ಷದಿಂದಾಗಬೇಕಿದೆ ಪಂಚೇಂದ್ರಿಯಗಳನ್ನು ಕಳೆದುಕೊಂಡಿರುವ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿ ಕಾಂಗ್ರೆಸ್ ಸರ್ಕಾರ ಕಾರ್ಯಪ್ರವೃತ್ತವಾಗುತ್ತಿದೆ ಇದಕ್ಕೆ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಸಂಘಟನೆ ಮೂಲಕ ಮುಂದಾಗಬೇಕೆಂದು ಹೊಸಕೋಟೆ ಶಾಸಕ ಹಾಗೂ ಮೇಕೆದಾಟು ಪಾದಯಾತ್ರೆಯ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಶರತ್ ಬಚ್ಚೇಗೌಡ ತಿಳಿಸಿದರು. ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವತಿಯಿಂದ ಮೇಕೆದಾಟು ಪಾದಯಾತ್ರೆ ನಮ್ಮ ನೀರು ನಮ್ಮ ಹಕ್ಕು ಸಂಗಮದಿಂದ ಪ್ರಾರಂಭವಾಗುವ ಕಾರ್ಯಕ್ರಮದ ಪೂರ್ವ ಬಾವಿ ಸಭೆಯಲ್ಲಿ ಮಾತನಾಡಿ, 18 ರಂದು ಮೇಕ್ರಿ ವೃತ್ತಕ್ಕೆ ಆಗಮಿಸಲಿದ್ದು ಅದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಿಂದ ತಲಾ ಹತ್ತು ಸಾವಿರ ಕಾರ್ಯಕರ್ತರು ಸೇರಬೇಕು ಕಾವೇರಿ ನೀರು ನಮಗೂ ಬೇಕು ಎನ್ನುವ ಮಹತ್ವಾಕಾಂಕ್ಷೆಯ ಪಾದಯಾತ್ರೆ ಯಶಸ್ವಿಯಾಗಿ ನಡೆಯಲು ಪೂರ್ವ ಬಾವಿ ಸಭೆ ನಡೆಸಿದ್ದೇವೆ. ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ಅಗತ್ಯ ಮಾರ್ಗಸೂಚಿಯನ್ನು ವ್ಯವಸ್ಥಿತವಾಗಿ ಮಾಡಿದ್ದು ಪಾದಯಾತ್ರೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಲಾಗಿದೆ.ಸರ್ಕಾರ ನೀರೂ ಕೊಡುತ್ತಿಲ್ಲಾ ಇದಕ್ಕಾಗಿ ಹೋರಾಟ ಮಾಡುವವರಿಗೂ ಅನುಕೂಲ ಮಾಡುತ್ತಿಲ್ಲಾ ಬಯಲು ಸೀಮೆಯ ರೈತರಿಗೆ ಯಾವುದೇ ಅನುಕೂಲ ಮಾಡುತ್ತಿಲ್ಲಾ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಮತ್ತು ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಪಾದಯಾತ್ರೆ ನಡೆಯುತ್ತಿದ್ದು ಎಂದು ತಿಳಿಸಿದರು.

ನಮ್ಮ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಸುಮಾರು 66 ಟಿ.ಎಂ.ಸಿ ನೀರನ್ನು ನೀಡಲು ಡಿ.ಪಿ.ಆರ್ ಆಗಿತ್ತು ನಂತರ ಬಂದ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ತಾರತಮ್ಯ ಮಾಡುತ್ತಿದೆ, ಆದ್ದರಿಂದ 9 ರಂದು ಮೇಕೆದಾಟು ನಲ್ಲಿ ಪ್ರಾರಂಬಿಸಿ 19 ರ ವರೆಗೆ ಸುಮಾರು 75 ವಿಧಾನಸಭಾ ಕ್ಷೇತ್ರಗಳಿಗೆ ಮುಟ್ಟುವ ಪಾದಯಾತ್ರೆ ಕಾರ್ಯ ಮಾಡುತ್ತಿದ್ದು ಮುಂಬರುವ ತಾಲ್ಲೂಕು, ಜಿಲ್ಲಾ ಹಾಗೂ ವಿಧಾನಸಭೆ ಚುನಾವಣೆಗೆ ಜನರಲ್ಲಿ ಆಶಾಭಾವನೆ ಮೂಡಿಸುವ ಕೆಲಸ ಕಾಂಗ್ರೆಸ್ ಮುಖಂಡರು ಒಟ್ಟಾಗಿ ಮಾಡುತ್ತಿದ್ದೇವೆ ಇದಕ್ಕೆ ನಮ್ಮ ದೇವನಹಳ್ಳಿ ತಾಲ್ಲೂಕಿನಿಂದ ಕನಿಷ್ಟ 10 ಸಾವಿರ ಜನಸಂಖ್ಯೆಯನ್ನು ಪಾದಯಾತ್ರೆಗೆ ಕರೆತರುವ ಕೆಲಸ ಮಾಡಬೇಕೆಂದು ಮಾಜಿ ಶಾಸಕ ವೆಂಕಟಸ್ವಾಮಿ ತಿಳಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮತ್ತು ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಕುಮಾರ್ ರವರ ನೂತನ ವರ್ಷದ ಕ್ಯಾಲೆಂಡರ್ ನ್ನು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಬಿಡುಗಡೆ ಮಾಡಿದರು.

ಪೂರ್ವಬಾವಿ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಶಾಮಣ್ಣ, ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಪ್ಪ, ಮಾಜಿ ಶಾಸಕ ಮುನಿನರಸಿಂಹಯ್ಯ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್, ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಉಪಾಧ್ಯಕ್ಷ ಶಾಂತಕುಮಾರ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಅನಂತಕುಮಾರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಹಾಗೂ ಗ್ರಾಮ ಪಂಚಾಯತಿ , ಪುರಸಭೆ ಚುನಾಯಿತ ಪ್ರತಿನಿಧಿಗಳು ಮುಖಂಡರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top