ಸಿಎಂ ಸ್ಟಾಲಿನ್ ಜೊತೆ ಮಾತನಾಡುತ್ತಿಲ್ಲ
ತಮಿಳುನಾಡಿಗೆ ಕಾವೇರಿ ನೀರು
ಬಿಡುಗಡೆ ವಿಚಾರದಲ್ಲಿ
ತಮಿಳುನಾಡಿನ ಡ್ಯಾಂಗಳಲ್ಲಿ
ನೀರಿನ ಸ್ಟಾಕ್ ಹೆಚ್ಚಾಗಿದೆ ಎಂದು
ನಾವು ಮೊದಲಿನಿಂದಲೂ ನಾವು ಹೇಳಿಕೊಂಡು ಬಂದಿದ್ದೇವೆ ಆದರೂ, ರಾಜ್ಯ ಸರ್ಕಾರ ನೀರು ಬಿಡುತ್ತ ಬಂದಿದೆ. ರಾಜ್ಯ ಸರ್ಕಾರ ಕಾನೂನಾತ್ಮಕವಾಗಿ ಗಂಭೀರವಾಗಿ ತೆಗೆದುಕೊಂಡು ಹೋರಾಟ ಮಾಡುತ್ತಿಲ್ಲ. ಹೀಗಾಗಿ ಕಾವೇರಿ ಜಲಾನಯನ ರೈತರಿಗೆ, ಬೆಂಗಳೂರಿಗೆ ಕಷ್ಟ ಆಗಲಿದೆ. ಸರ್ಕಾರ ಕಾನೂನಾತ್ಕವಾಗಿ ಅಥವಾ ಮಾತುಕತೆಯಿಂದ ಬಗೆ ಹರಿಸಬೇಕು. ಆದರೆ ನಮ್ಮ ಸಿಎಂ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಮಾತನಾಡಲು ತಯಾರಿಲ್ಲ. ಇಂಡಿಯಾ ಒಕ್ಕೂಟ ಅಂತ ಹೇಳುತ್ತಾರೆ. ಇವರು ನಮ್ಮ ನೀರಿನ ಹಕ್ಕಿನ ಬಗ್ಗೆ ಮಾತನಾಡುವುದಿಲ್ಲ. ಸದ್ಯ ನೀರು ಬಿಡುವುದಿಲ್ಲ ಅನ್ನುವ ತಮ್ಮ ನಿಲುವಿಗೆ ಅವರು ಗಟ್ಟಿಯಾಗಿ ನಿಲ್ಲಬೇಕು. ನಾವು ಈ ನಿಲುವಿನ ಬಗ್ಗೆ ಸರ್ಕಾರದ ಜೊತೆ ನಿಲ್ಲುತ್ತೇವೆ. ಒಂದು ವೇಳೆ ನೀರು ಬಿಟ್ಟರೆ ನಾವು ಸರ್ಕಾರದ ವಿರುದ್ದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
Facebook
Twitter
LinkedIn
WhatsApp
Telegram
Email
Tumblr