ಅಂಬೇಡ್ಕರ್ ಅವರನ್ನು ಪ್ರತಿದಿನ ನೆನೆಯಬೇಕು

ಕೊಪ್ಪಳ,: ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮಾನತೆ ಮೂಡಿಸುವ ಉದ್ದೇಶದಿಂದ ಹಲವು ವಿಷಯಗಳನ್ನು ಸಂವಿಧಾನದಲ್ಲಿ ಅಳವಡಿಸುವುದರ ಜೊತೆಗೆ ಪ್ರಜಾಪ್ರಭುತ್ವದ ಬಲವರ್ದನೆಗೆ ಅವರು ನೀಡಿರುವ ಸಲಹೆಗಳ ಕಾರಣದಿಂದ ದೇಶದ ಜನತೆ ಅಂಬೇಡ್ಕರ್ ಅವರನ್ನು ಪ್ರತಿ ದಿನ ನೆನೆಯಬೇಕು ಎಂದು ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಬಿ.ಗಿರೀಶಾನಂದ ಜ್ಞಾನಸುಂದರ ಹೇಳಿದರು. ಗುರುವಾರ ನಗರದ ಜಿಲ್ಲಾ ಸಾಂತ್ವಾನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಅರ್.ಅಂಬೇಡ್ಕರ್ ಅವರ 131 ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ಬಲವರ್ಧನೆಗೆ ಸಂವಿಧಾನದ ಮೂಲಕ ಅಂಬೇಡ್ಕರ್ ನೀಡಿರುವ ಪ್ರತಿಯೊಂದು ಸಲಹೆಗಳೂ ಅತ್ಯಮೂಲ್ಯವಾಗಿದ್ದು, ಭಾರತದ ಸಂವಿಧಾನವು ದೇಶದ ಎಲ್ಲಾ ವರ್ಗದ ನಾಗರೀಕರ ಶ್ರೇಯೋಭಿವೃದ್ದಿಯ ಉದ್ದೇಶ ಹೊಂದಿದ್ದು, ವೈವಿಧ್ಯಮಯ ಸಂಸ್ಕೃತಿ ಹೊಂದಿರುವ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯುಯುತ ಹಕ್ಕುಗಳನ್ನು ನೀಡಿದೆ.

ಸಂವಿಧಾನ ರಚನೆ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳಿಂದ ರೂಪಿತವಾದ ಕಾನೂನುಗಳನ್ನು ಸಮಾಜ ನೆನೆಯಬೇಕು, ಶಾಸಕಾಂಗ ಮತ್ತು ಕಾರ್ಯಾಂಗಗಳು ತಮಗೆ ನೀಡಿರುವ ಅಧಿಕಾರವನ್ನು ಸಮರ್ಪಕವಾಗಿ ಬಳಿಸಿಕೊಂಡು ಸಮಾಜಮುಖಿ ಯೋಜನೆಗಳನ್ನು ರೂಪಿಸಿ, ಅವುಗಳನ್ನು ಎಲ್ಲಾ ವರ್ಗದ ಜನರಿಗೆ ತಲುಪುವಂತೆ ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಮೂಲಕ ಅಂಬೇಡ್ಕರ್ ಅವರ ಸಂವಿಧಾನ ರಚನೆ ಹಾಗೂ ಪ್ರಜಾಪ್ರಭುತ್ವದ ಉದ್ದೇಶವನ್ನು ಸಾರ್ಥಕಗೊಳಿಸಬೇಕು ಎಂದರು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ರುದ್ರಮುನಿ ಹಿರೇಮಠ, ಯೋಜನಾ ನಿರ್ದೇಶಕ ಶೇಖರ ನಾಯ್ಕರ್, ಸಿಬ್ಬಂದಿಗಳಾದ ಹುಲ್ಲೇಶ ಕಟ್ಟಿಮನಿ, ಅರುಣ ಹೊಸಮನಿ, ಸಾಂತ್ವನ ಕೇಂದ್ರದ ಸಿಬ್ಬಂದಿಗಳಾದ ಭಾರತಿ ಸುಣಗಾರ, ಮಂಜುಳಾ ಭಜಂತ್ರಿ, ಭೀಮವ್ವ ಬನ್ನಿಕಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

Leave a Comment

Your email address will not be published. Required fields are marked *

Translate »
Scroll to Top