ಇಂದಿನಿಂದ ಆಂಬ್ಯುಲೆನ್ಸ್​ ಸೇವೆ ಬಂದ್​​? ರಾಜ್ಯ ಸರ್ಕಾರಕಿವಿ ಹಿಂಡಿದ ಕುಮಾರಸ್ವಾಮಿ

ಬೆಂಗಳೂರು: ಆರೋಗ್ಯ ಕವಚ ೧೦೮ ಆಂಬುಲೆನ್ಸ್‌ ಸಿಬ್ಬಂದಿಗೆ ಕಳೆದ ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಆಂಬುಲೆನ್ಸ್‌ ಸಿಬ್ಬಂದಿ ಕುಟುಂಬ ನರ‍್ವಹಣೆಗೂ ಪರದಾಡುತ್ತಿದ್ದಾರೆ. ಜಿವಿಕೆ) ಎಂಬ ಸಂಸ್ಥೆಯಡಿ ೭೧೦ ಆಂಬುಲೆನ್ಸ್ ಕರ‍್ಯನರ‍್ವಹಿಸುತ್ತಿದ್ದು, ಅಂದಾಜು ೩,೬೦೦ ಸಿಬ್ಬಂದಿ ಕರ‍್ಯ ನರ‍್ವಹಿಸುತ್ತಿದ್ದಾರೆ. ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಜಿವಿಕೆ ಮತ್ತು ರ‍್ಕಾರದ ವಿರುದ್ಧ ಸಿಬ್ಬಂದಿ ತಿರುಗಿಬಿದ್ದಿದ್ದು, ಇಂದು ರಾತ್ರಿ ೮ ಗಂಟೆಯಿಂದ ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ.

ಕೊರೊನಾ ನಂತರ ಸಿಬ್ಬಂದಿಗೆ ಹಲವು ಬಾರಿ ವೇತನ ಪಾವತಿ ಸಮಸ್ಯೆಯಾಗುತ್ತಲೇ ಇತ್ತು. ೨೦೨೨ ಸೆಪ್ಟೆಂಬರ್‌ನಲ್ಲಿ ಸಿಬ್ಬಂದಿ ನ್ಯಾಯಾಲಯದ ಮೊರೆ ಹೋಗಿದ್ದರು. ರ‍್ತವ್ಯ ನಿಲ್ಲಿಸಿ ಮುಷ್ಕರ ನಡೆಸಿದ ನಂತರ ಸಂಬಳ ನೀಡಿದ್ದರು. ಆದರೆ, ಮುಂದಿನ ಎರಡು ತಿಂಗಳಲ್ಲಿ ಸರಿಯಾಗಿ ವೇತನ ಪಾವತಿಯಾಯಿತು. ನಂತರ ಮತ್ತೆ ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ರ‍್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನರ‍್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ ೧೦೮ ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ! ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. ೩ ತಿಂಗಳಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು!” ಎಂದು ವಾಗ್ದಾಳಿ ಮಾಡಿದರು.

ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಬಿಗಿದಿದ್ದಾರೆ. “ರಾಜ್ಯದ ಒಬ್ಬನೇ ಒಬ್ಬ ಸರಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗುಡುಗಿದ್ದರು. ಹಾಗಾದರೆ, ಮಾನ್ಯ ಸಿದ್ದರಾಮಯ್ಯನವರೇ.. ನೀವು ರಾಜೀನಾಮೆ ನೀಡುವುದು ಯಾವಾಗ? ಕರ‍್ಚಿ ಬಿಡುವ ಮೊದಲು ಆಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ ಎಂದು ಹರಿಹಾಯ್ದರು.

 

ವೇತನ ಪಾವತಿ ಸಂಬಂಧ ಆಂಬ್ಯುಲೆನ್ಸ್ ಸಿಬ್ಬಂದಿ ಜೊತೆ ಆರೋಗ್ಯ ಇಲಾಖೆ ಸಭೆ ನಡೆಸಿದೆ. ಇಲಾಖೆ ಸಂಜೆ ೬ ಗಂಟೆಯವರೆಗೂ ಕಾಲಾವಕಾಶ ಕೇಳಿದೆ. ಇಲಾಖೆಯ ಏನು ತರ‍್ಮಾನ ಕೈಗೊಳ್ಳುತ್ತೆ ಅಂತ ನೋಡಿಕೊಂಡು ಆಂಬ್ಯುಲೆನ್ಸ್ ಸಿಬ್ಬಂದಿ ಮುಂದಿನ ಹೆಜ್ಜೆ ಇಡುತ್ತಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top