ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಶಾಕ್

ಬೆಂಗಳೂರು,ಜ.೨೧- ಬೆಲೆ ಏರಿಕೆಯಿಂದ ತತ್ತರಿಸಿರುವ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಬೆಂಗಳೂರು ಜಲ ಮಂಡಳಿಯಿಂದ ನೀರಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಹಿನ್ನೆಲೆ ಬೆಂಗಳೂರು ಜಲ ಮಂಡಳಿಯು ರಾಜ್ಯ ಸರ್ಕಾರಕ್ಕೆ ನೀರಿನ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಿದೆ. ೮ ವರ್ಷಗಳ ಬಳಿಕ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯಲ್ಲಿ ಕೋರಿದೆ. ಈಗಾಗಲೇ ೨ ವರ್ಷಗಳ ಹಿಂದೆಯೇ ಸರ್ಕಾರಕ್ಕೆ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರೂ ಕೊರೊನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಒಪ್ಪಿರಲಿಲ್ಲ. ಈಗ ಮತ್ತೆ ನೀರಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಬೆಂಗಳೂರು ಜಲಮಂಡಳಿಯು ನೀರಿನ ನಿರ್ವಹಣಾ ವೆಚ್ಚದ ಕಾರಣ ನೀರಿನ ದರ ಹೆಚ್ಚಳದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಗೃಹ ಬಳಕೆಯ ನೀರಿನ ದರವನ್ನು ಶೇ.೧೬ರಷ್ಟು ಹಾಗೂ ವಾಣಿಜ್ಯ ಬಳಕೆಯ ನೀರಿನ ದರವನ್ನು ಶೇ.೨೧ರಷ್ಟು ಹೆಚ್ಚಳ ಮಾಡುವಂತೆ ಕೋರಿದ್ದು, ಒಂದು ವೇಳೆ ರಾಜ್ಯ ಸರ್ಕಾರ ಬೆಂಗಳೂರು ಜಲ ಮಂಡಳಿ ಸಲ್ಲಿಸಿರುವಂತ ನೀರಿನ ದರ ಹೆಚ್ಚಳದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ದರ ಏರಿಕೆಯ ಬರೆ ಬೀಳಲಿದೆ

Leave a Comment

Your email address will not be published. Required fields are marked *

Translate »
Scroll to Top