ಭಯೋತ್ಪಾದನಾ ವಿರೋಧಿ ದಿನ : ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ

ಬೆಂಗಳೂರು: ಮಾಜಿ ಪ್ರಧಾನಿ ಹುತಾತ್ಮ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯ ಭಾಗವಾಗಿ ಆಚರಿಸುವ “ಭಯೋತ್ಪಾದನಾ ವಿರೋಧಿ ದಿನದ” ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ವಚನ ಬೋಧಿಸಿದರು. 

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top